ಹೈಕೋರ್ಟ್ ಆದೇಶ ಮಾಡಿದ್ದರೂ 8 ವರ್ಷಗಳಿಂದ ರಾಜ್ಯ ಸರ್ಕಾರವು ತಮಗೆ ಭೂಮಿ ಮಂಜೂರು ಮಾಡುತ್ತಿಲ್ಲ ಎಂದು ಆರೋಪಿಸಿ ಆನೇಕಲ್ ನಿವಾಸಿಗಳಾದ ಗೋವಿಂದಯ್ಯ ಸೇರಿ ಮೂವರು ಸಲ್ಲಿಸಿದ್ದರು.

ಬೆಂಗಳೂರು(ಸೆ.09): ನ್ಯಾಯಾಲಯ ನಿರ್ದೇಶನ ನೀಡಿದ್ದರೂ ಆನೇಕಲ್‌ನಲ್ಲಿ ಖಾಸಗಿ ವ್ಯಕ್ತಿಗಳಿಗೆ ಜಮೀನು ಮಂಜೂರು ಮಾಡುವುದಕ್ಕೆ ಬರೋಬ್ಬರಿ ಎಂಟು ವರ್ಷಗಳಿಂದ ಸತಾಯಿಸುತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಲು ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಆನೇಕಲ್ ತಹಶೀಲ್ದಾರ್'ಗೆ ಹೈಕೋರ್ಟ್ 25 ಸಾವಿರ ರು. ದಂಡ ವಿಧಿಸಿದೆ.

ಹೈಕೋರ್ಟ್ ಆದೇಶ ಮಾಡಿದ್ದರೂ 8 ವರ್ಷಗಳಿಂದ ರಾಜ್ಯ ಸರ್ಕಾರವು ತಮಗೆ ಭೂಮಿ ಮಂಜೂರು ಮಾಡುತ್ತಿಲ್ಲ ಎಂದು ಆರೋಪಿಸಿ ಆನೇಕಲ್ ನಿವಾಸಿಗಳಾದ ಗೋವಿಂದಯ್ಯ ಸೇರಿ ಮೂವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿನೀತ್ ಕೋಠಾರಿ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ಮಾಡಿತು. ಆನೇಕಲ್ ತಾಲೂಕಿನಲ್ಲಿ ಗೋವಿಂದಯ್ಯ, ಗೌರಮ್ಮ ಮತ್ತು ರಾಜಮ್ಮ ಎಂಬುವರಿಗೆ ಸೇರಿದ ಜಮೀನನ್ನು ರಾಜ್ಯ ಸರ್ಕಾರ ಸ್ವಾಧೀನಪಡಿಸಿಕೊಂಡಿತ್ತು.