ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಸಿಎಂ ಕುಮಾರಸ್ವಾಮಿ ಅವರನ್ನು ನಿಂದಿಸಿದ ಪ್ರಕರಣ ಸಂಬಂಧ ದೂರು ದಾಖಲಿಸಿಲು ಕೋರ್ಟ್ ಅನುಮತಿ ನೀಡಿದೆ. 

ಕಲಬುರಗಿ: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿದ ಆರೋಪದ ಮೇರೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಪ್ರಕರಣ ದಾಖಲಿಸಲು ಕಲಬುರಗಿಯ ಜೆಎಂಎಫ್‌ಸಿ ನ್ಯಾಯಾಲಯ ಅನುಮತಿ ನೀಡಿದೆ. 

ಕುಮಾರಸ್ವಾಮಿ ಕುಟುಂಬಕ್ಕೆ ಸುಳ್ಳು ಹೇಳುವುದು, ಬೆನ್ನಿಗೆ ಚೂರಿ ಹಾಕುವುದು, ವಚನ ಭ್ರಷ್ಟತೆ, ವಂಚನೆ ರಕ್ತವಾಗಿದೆ ಎಂದು ಗಂಭೀರ ಆರೋಪ ಮಾಡಿರುವ ಯಡಿಯೂರಪ್ಪ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಆದೇಶಿಸಬೇಕೆಂದು ಎಚ್.ಡಿ. ಕುಮಾರಸ್ವಾಮಿ ಸೇನೆ ರಾಜ್ಯಾಧ್ಯಕ್ಷ ವೀರಣ್ಣ ಕೋರಳ್ಳಿ ನ್ಯಾಯಾಲಯದ ಮೆಟ್ಟಿಲೇರಿದ್ದರು. 

ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ, ಬಿಎಸ್‌ವೈ ವಿರುದ್ಧ ಪ್ರಕರಣ ದಾಖಲಿಸಲು ಆದೇಶ ನೀಡಿದೆ ಎಂದು ವೀರಣ್ಣ ಹೇಳಿದ್ದಾರೆ.