ಕೇಂದ್ರ ಸಚಿವೆ ಸ್ಮೃತಿ ಇರಾನಿಯವರ ಕಾರನ್ನು ಹಿಂಬಾಲಿಸಿಕೊಂಡು ಹೋಗಿ ತೊಂದರೆ ನೀಡಲು ಪ್ರಯತ್ನಿಸಿದ ನಾಲ್ವರು ಕಾಲೇಜು ವಿದ್ಯಾರ್ಥಿಗಳಿಗೆ ಕೋರ್ಟ್ ಜಾಮೀನು ನೀಡಿದೆ.
ನವದೆಹಲಿ (ಏ.02): ಕೇಂದ್ರ ಸಚಿವೆ ಸ್ಮೃತಿ ಇರಾನಿಯವರ ಕಾರನ್ನು ಹಿಂಬಾಲಿಸಿಕೊಂಡು ಹೋಗಿ ತೊಂದರೆ ನೀಡಲು ಪ್ರಯತ್ನಿಸಿದ ನಾಲ್ವರು ಕಾಲೇಜು ವಿದ್ಯಾರ್ಥಿಗಳಿಗೆ ಕೋರ್ಟ್ ಜಾಮೀನು ನೀಡಿದೆ.
ದಕ್ಷಿಣ ದೆಹಲಿಯ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿರುವ ನಾಲ್ವರು ವಿದ್ಯಾರ್ಥಿಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿತ್ತು. ನಾಲ್ವರು ವಿದ್ಯಾರ್ಥಿಗಳು ಸ್ನೇಹಿತನ ಹುಟ್ಟುಹಬ್ಬದ ಪಾರ್ಟಿಯಲ್ಲಿ ಮದ್ಯ ಸೇವಿಸಿ ಮನೆಗೆ ಕಾರಿನಲ್ಲಿ ಹಿಂತಿರುಗುತ್ತಿದ್ದರು. ಈ ವೇಳೆ ಸ್ಮೃತಿ ಇರಾನಿಯವರ ಕಾರು ರಸ್ತೆಯಲ್ಲಿ ಹೋಗುತ್ತಿದ್ದನ್ನು ನೋಡಿ ಅವರನ್ನು ಹಿಂಬಾಲಿಸಿಕೊಂಡು ಹೋಗಿದ್ದಾರೆ. ವಿದ್ಯಾರ್ಥಿಗಳು ಕುಡಿದ ಅಮಲಿನಲ್ಲಿ ಮೈಮರೆತಿದ್ದರು ಎಂದು ವೈದ್ಯಕೀಯ ವರದಿಯಿಂದ ದೃಢಪಟ್ಟಿದೆ. ಸಚಿವೆಯ ಕಾರು ಮೋತಿ ಬಾಗ್ ಮೇಲ್ಸೇತುವೆ ದಾಟಿ ಹೋಗುತ್ತಿದ್ದಾಗ ಓವರ್ ಟೇಕ್ ಮಾಡಲು ವಿದ್ಯಾರ್ಥಿಗಳು ಪ್ರಯತ್ನಿಸಿದ್ದಾರೆ. ಮೊದಲು ಪಿಸಿಆರ್ ಕರೆ ಮಾಡಿದ ಸಚಿವೆ ನಂತರ ಅಧಿಕೃತವಾಗಿ ದೂರು ನೀಡಿದರು. ನಂತರ ವಿದ್ಯಾರ್ಥಿಗಳನ್ನು ಬಂಧಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.
