ಉಡುಪಿ[ಏ. 20]  ಸುಮಾರು 21 ಸಲಿಂಗ - ಪೋಕ್ಸೋ ಪ್ರಕರಣಗಳಲ್ಲಿ ಆರೋಪಿಯಾಗಿರುವ ಚಂದ್ರ ಕೆ.ಹೆಮ್ಮಾಡಿಯ ಜಾಮೀನು ಅರ್ಜಿಯನ್ನು ಶನಿವಾರ ಜಿಲ್ಲಾ ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ.
ಬೈಂದೂರು ಠಾಣೆಯಲ್ಲಿ ದಾಖಲಾಗಿದ್ದ ಒಂದು ಪ್ರಕರಣದಲ್ಲಿ ಜಾಮೀನು ನೀಡುವಂತೆ ಆರೋಪಿ ಪರ ವಕೀಲರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶ ಸಿ.ಎಂ.ಜೋಷಿ ಅವರು ಜಾಮೀನು ನಿರಾಕರಿಸಿದ್ದಾರೆ.

ಆರೋಪಿಗೆ ಜಾಮೀನು ನೀಡಿದರೇ ಇನ್ನಷ್ಟು ಮಕ್ಕಳ ಮೇಲೆ ದೌರ್ಜನ್ಯ ಎಸಗುವ ಸಾಧ್ಯತೆ ಇದೆ, ಆದ್ದರಿಂದ ಜಾಮೀನು ನೀಡಬಾರದು ಎಂದು ನ್ಯಾಯಾಲಯಕ್ಕೆ ಆಕ್ಷೇಪ ಸಲ್ಲಿಸಲಾಗಿತ್ತು. ಈ ಮನವಿಯ ಹಿನ್ನೆಲೆಯಲ್ಲಿ ನ್ಯಾಯಾಧೀಶರು ಆರೋಪಿಗೆ ಜಾಮೀನು ತಿರಸ್ಕರಿಸಿದರು ಎಂದು ಸರ್ಕಾರಿ ವಿಶೇಷ ಅಭಿಯೋಜಕ ವಿಜಯ ವಾಸು ಪೂಜಾರಿ ತಿಳಿಸಿದ್ದಾರೆ.

ಕರಾವಳಿಗರಿಗೆ ಬುದ್ಧಿ ಇಲ್ಲ ಎಂದ ಸಿಎಂಗೆ ಪಿಯು ರಿಸಲ್ಟ್ ನೋಡಿ ಎಂದ ನಳಿನ್!

ಆರೋಪಿ ಚಂದ್ರ ಅಪ್ರಾಪ್ತ ವಯಸ್ಸಿನ ಬಾಲಕರನ್ನು ಪುಸಲಾಯಿಸಿ ತಮ್ಮ ಕಾಮತೃಷೆಗೆ ಬಳಸಿಕೊಳ್ಳುತ್ತಿದ್ದ. ಇಂತಹ 21 ಪ್ರಕರಣಗಳು ಆತನ ಮೇಲೆ ದಾಖಲಾಗಿದೆ. ಇಷ್ಟು ಸಂಖ್ಯೆಯಲ್ಲಿ ಪೋಕ್ಸೊ ಪ್ರಕರಣಗಳು ದಾಖಲಾಗಿರುವುದು ದೇಶದಲ್ಲಿಯೇ ಪ್ರಥಮವಾಗಿದೆ. ಆತನ ವಿರುದ್ಧ 20 ಪ್ರಕರಣಗಳಲ್ಲಿ ಬಾಡಿ ವಾರೆಂಟ್‌ ಜಾರಿಯಲ್ಲಿದೆ.