ಗೋರಕ್ಷಣೆಯ ಹೆಸರಿನಲ್ಲಿ ನಡೆಯುವ ಹಿಂಸೆಗೆ ದೇಶಾದ್ಯಂತ ಖಂಡನೆ ವ್ಯಕ್ತವಾಗುತ್ತಿರುವ ಬೆನ್ನಲ್ಲೇ , ದೆಹಲಿಯಲ್ಲಿ ಕೋಣಗಳನ್ನು ಸಾಗಿಸುತ್ತಿದ್ದವರ ಮೇಲೆ ಗೋರಕ್ಷಕರು ದಾಳಿ ನಡೆಸಿರುವ ಘಟನೆ ನಡೆದಿದೆ.

ನವದೆಹಲಿ (ಜು. 08): ಗೋರಕ್ಷಣೆಯ ಹೆಸರಿನಲ್ಲಿ ನಡೆಯುವ ಹಿಂಸೆಗೆ ದೇಶಾದ್ಯಂತ ಖಂಡನೆ ವ್ಯಕ್ತವಾಗುತ್ತಿರುವ ಬೆನ್ನಲ್ಲೇ , ದೆಹಲಿಯಲ್ಲಿ ಕೋಣಗಳನ್ನು ಸಾಗಿಸುತ್ತಿದ್ದವರ ಮೇಲೆ ಗೋರಕ್ಷಕರು ದಾಳಿ ನಡೆಸಿರುವ ಘಟನೆ ನಡೆದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ದೆಹಲಿಯ ಬಾಬಾ ಹರಿದಾಸ್ ನಗರದಲ್ಲಿ ಕೋಣಗಳನ್ನು ಕೊಂಡೊಯ್ಯುತ್ತಿದ್ದವರ ಮೇಲೆ ಗುಂಪೊಂದು ದಾಳಿ ನಡೆಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹಸುಗಳನ್ನು ಕಸಾಯಿಖಾನೆಗೆ ಸಾಗಿಸಲಾಗುತ್ತಿದೆ ಎಂದು ಆರೋಪಿಸಿ ಗುಂಪು, ವಾಹನಗಳಲಿದ್ದ ಮಂದಿಯನ್ನು ಥಳಿಸಿದೆ, ಹಾಗೂ ಅವರ ವಾಹನಗಳಿಗೆ ಕಲ್ಲೆಸೆದು ಜಖಂಗೊಳಿಸಿದೆ.

ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.