ಬಿಜೆಪಿ ಸಭೆಯಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ದೋವಲ್ : ದೂರು

First Published 17, Jan 2018, 7:55 AM IST
CPIM lodges complaint with ECI over NSA Ajit Doval joining
Highlights

ಬಿಜೆಪಿಯ ಚುನಾವಣಾ ಸಭೆಯೊಂದರಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಭಾಗವಹಿಸಿದ್ದ ಬಗ್ಗೆ ತ್ರಿಪುರಾ ಸಿಪಿಎಂ ಘಟಕ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ನವದೆಹಲಿ: ಬಿಜೆಪಿಯ ಚುನಾವಣಾ ಸಭೆಯೊಂದರಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಭಾಗವಹಿಸಿದ್ದ ಬಗ್ಗೆ ತ್ರಿಪುರಾ ಸಿಪಿಎಂ ಘಟಕ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಗೃಹ ಸಚಿವ ರಜನಾಥ್ ಸಿಂಗ್‌ರ ಅಧಿಕೃತ ನಿವಾಸದಲ್ಲಿ ಜ.14ರಂದು ಸಭೆ ನಡೆದಿದ್ದು, ರಾಜಕೀಯ ಉದ್ದೇಶಕ್ಕಾಗಿ ರಾಷ್ಟ್ರೀಯ ಭದ್ರತಾ ಸಲಹೆಗಾರರನ್ನು ಬಳಸಿಕೊಳ್ಳುವ ಮೂಲಕ ಚುನಾವಣಾ ನಿಯಮಗಳನ್ನು ಬಿಜೆಪಿ ಉಲ್ಲಂಘಿಸಿದೆ.

ತ್ರಿಪುರಾ, ಮೇಘಾಲಯ ಮತ್ತು ನಾಗಾಲ್ಯಾಂಡ್ ವಿಧಾನ ಸಭೆ ಚುನಾವಣೆಗೆ ತಂತ್ರಗಾರಿಕೆ, ರಾಜಕೀಯ ಉದ್ದೇಶದಿಂದ ಸಭೆ ಕರೆಯಲಾಗಿತ್ತು. ಹೀಗಾಗಿ ಬಿಜೆಪಿ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ದೂರಿನಲ್ಲಿ ತಿಳಿಸಲಾಗಿದೆ.

loader