ಲಕ್ನೋ (ಸೆ.11): ಕ್ರಿಕೆಟಿಗ ಪ್ರವೀಣ್ ಕುಮಾರ್ ಸಮಾಜವಾದಿ ಪಕ್ಷವನ್ನು ಸೇರಿದ್ದಾರೆ.

ಮುಂಬರುವ ಉತ್ತರ ಪ್ರದೇಶ ಚುನಾವಣೆಗೆ ಸ್ಪರ್ಧಿಸುತ್ತೀರಾ ಎನ್ನುವ ಪ್ರಶ್ನೆಗೆ, ರಾಜಕೀಯ ಕ್ಷೇತ್ರಕ್ಕೆ ನಾನಿನ್ನು ಹೊಸಬ. ನಾನೀಗ ರಾಜಕೀಯ ಕಲಿಯಲು ಪ್ರಯತ್ನಿಸುತ್ತಿದ್ದೇನೆ ಎಂದು ಪ್ರವೀಣ್ ಮಾದ್ಯಮದವರಿಗೆ ಪ್ರತಿಕ್ರಿಯಿಸಿದ್ದಾರೆ.

ನಾನು ಮುಖ್ಯಮಂತ್ರಿ ಅಖಿಲೇಶ್ ಯಾದವ್ ರವರನ್ನು ಭೇಟಿ ಮಾಡಿ ಪಕ್ಷಕ್ಕೆ ಸೇರಲು ನಿರ್ಧರಿಸಿದ್ದೇನೆ ಎಂದಿದ್ದಾರೆ.

ಮುಖ್ಯಮಂತ್ರಿ ಅಖಿಲೇಶ್ ಯಾದವ್ ರವರನ್ನು ಶ್ಲಾಘಿಸುತ್ತಾ, ಕ್ರೀಡಾಳುಗಳಿಗಾಗಿ ಅವರು ಸಾಕಷ್ಟು ಉತ್ತಮ ಕೆಲಸಗಳನ್ನು ಮಾಡಿದ್ದಾರೆ. ಲಕ್ನೋ ಮತ್ತು ಸೈಫಾಯ್ ನಲ್ಲಿ ದೊಡ್ಡ ಕ್ರೀಡಾಂಗಣ ನಿರ್ಮಾಣವಾಗುತ್ತಿದೆ ಎಂದು ಪ್ರವೀಣ್ ಹೇಳಿದ್ದಾರೆ.