ನಿನ್ನೆಯಷ್ಟೇ ನಜೀಬ್ ಅಹ್ಮದ್ ಅವರ ತಾಯಿ ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾಗಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಮನವಿ ಸಲ್ಲಿಸಿದ್ದರು.
ನವದೆಹಲಿ (ನ.12): ನಿಗೂಢವಾಗಿ ನಾಪತ್ತೆಯಾಗಿ ಹಲವು ದಿನಗಳು ಕಳೆದರೂ ಈ ವರೆಗೂ ಪತ್ತೆಯಾಗದ ಜೆಎನ್ ಯು ವಿದ್ಯಾರ್ಥಿ ನಜೀಬ್ ಅಹ್ಮದ್ ಪ್ರಕರಣವನ್ನು ದೆಹಲಿ ಅಪರಾಧ ತನಿಖಾ ದಳಕ್ಕೆ ಹಸ್ತಾಂತರ ಮಾಡಲಾಗಿದೆ.
ನಾಪತ್ತೆಯಾಗಿ ಹಲವು ದಿನಗಳು ಕಳೆದರೂ ಈ ವರೆಗೂ ಯಾವುದೇ ರೀತಿಯ ಸುಳಿವುಗಳು ಪತ್ತೆಯಾಗದ ಹಿನ್ನೆಲೆಯಲ್ಲಿ ನಿನ್ನೆಯಷ್ಟೇ ನಜೀಬ್ ಅಹ್ಮದ್ ಅವರ ತಾಯಿ ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾಗಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಮನವಿ ಸಲ್ಲಿಸಿದ್ದರು.
ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಗಂಭೀರವಾಗಿ ಪರಿಗಮಿಸಿದ್ದ ಸರ್ಕಾರ, ಪ್ರಕರಣದ ತನಿಖೆಯನ್ನು ದೆಹಲಿ ಅಪರಾಧ ತನಿಖಾ ದಳಕ್ಕೆ ಹಸ್ತಾಂತರ ಮಾಡಿದೆ ಎಂದು ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
