ಹೊನ್ನಾವರದಲ್ಲಿ ಹಿಂದೂ ಯುವಕನ ಹತ್ಯೆ ಖಂಡಿಸಿ ಮುಂಡಗೋಡಿನಲ್ಲಿ  ಬಿಜೆಪಿ ಹಾಗೂ ಹಿಂದೂ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ.  ಟೈಯರ್'ಗೆ ಬೆಂಕಿ ಹಚ್ಚಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.  ಹಂತಕರನ್ನು ಶೀಘ್ರ ಬಂಧಿಸುವಂತೆ ಆಗ್ರಹಿಸಿ ರಸ್ತೆ ತಡೆದು ನೂರಾರು ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.  ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.  

ಕಾರವಾರ (ಡಿ.11): ಹೊನ್ನಾವರದಲ್ಲಿ ಹಿಂದೂ ಯುವಕನ ಹತ್ಯೆ ಖಂಡಿಸಿ ಮುಂಡಗೋಡಿನಲ್ಲಿ ಬಿಜೆಪಿ ಹಾಗೂ ಹಿಂದೂ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಟೈಯರ್'ಗೆ ಬೆಂಕಿ ಹಚ್ಚಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಹಂತಕರನ್ನು ಶೀಘ್ರ ಬಂಧಿಸುವಂತೆ ಆಗ್ರಹಿಸಿ ರಸ್ತೆ ತಡೆದು ನೂರಾರು ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕುಮಟಾದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದ್ದು ಎರಡು ಪೋಲೀಸ್ ವಾಹನಗಳು ಜಖಂಗೊಂಡಿವೆ. ಜಿಲ್ಲಾ ಸಶಸ್ತ್ರ ಮೀಸಲು ಪಡೆ ವಾಹನದ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಪ್ರತಿಭಟನಾನಿರತರ ಮೇಲೆ ಪೋಲೀಸರು ಲಾಠಿ ಚಾರ್ಜ್ ಮಾಡಿದ್ದು​ ರೊಚ್ಚಿಗೆದ್ದ ಬಿಜೆಪಿ ಕಾರ್ಯಕರ್ತರು ಪೋಲೀಸ್'ರ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ. ಈ ಸಂದರ್ಭದಲ್ಲಿ ಪಶ್ಚಿಮ ವಲಯ ಐಜಿಪಿ ವಾಹನ ಹೇಮಂತ್ ನಿಂಬಾಳ್ಕರ್ ವಾಹನಕ್ಕೆ ಬೆಂಕಿ ತಗುಲಿದೆ.