ಬೆಂಗಳೂರು : ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿ ರುವ ರೈತರ ಸಾಲಮನ್ನಾ ಯೋಜನೆಯ ಪ್ರಕ್ರಿಯೆಗೆ ಬರುವ ಡಿ.5 ರಿಂದ ಚಾಲನೆ ದೊರಕಲಿದೆ. ಈ ಹಿನ್ನೆಲೆಯಲ್ಲಿ ಡಿ. 1ರೊಳಗೆ ರೈತರ ಸಾಲಮನ್ನಾಕ್ಕೆ ಸಂಬಂಧಿಸಿದಂತೆ ಎಲ್ಲಾ ಮಾಹಿತಿಯನ್ನು ಸಂಗ್ರಹಿಸುವಂತೆ ಅಧಿಕಾರಿ ಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯೋತ್ಸವ ದಿನವಾದ ನ. 1ರಂದು ಯೋಜನೆಗೆ ಚಾಲನೆ ನೀಡಲಾಗು ವುದು ಎಂದು ಈ ಹಿಂದೆ ಘೋಷಿಸಿದ್ದರೂ ಅದು ಕಾರ್ಯರೂಪಕ್ಕೆ ಬಂದಿರಲಿಲ್ಲ. ಇದೀಗ ಡಿ.5 ರ ದಿನ ನಿಗದಿಪಡಿಸಲಾಗಿದೆ. ವಿಧಾನಸೌಧದಲ್ಲಿ ಮಂಗಳವಾರ ನಡೆದ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾ ಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿಗಳ ಸುದೀರ್ಘ ಸಭೆಯ ನಂತರ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು,
ರಾಷ್ಟ್ರೀಕೃತ ಬ್ಯಾಂಕ್‌ಗಳಿಗೆ ಮಾಡಬೇಕಾದ ಮರುಪಾವತಿಯ ಸಂಬಂಧ ರಾಜ್ಯ ಸರ್ಕಾರವು ಕಲಬುರಗಿ ಜಿಲ್ಲೆಯ ಸೇಡಂ ಮತ್ತು ದೊಡ್ಡಬಳ್ಳಾಪುರ ತಾಲೂಕುಗಳಲ್ಲಿ ಪ್ರಾಯೋಗಿಕ ಕಾರ್ಯ ಆರಂಭಿಸಲಾಗಿದೆ.

ಎರಡು ತಾಲೂಕುಗಳಲ್ಲಿನ ರೈತರ ಸಾಲದ ಮೊತ್ತದ ಕುರಿತು ಮಾಹಿತಿ ಸಂಗ್ರಹಿಸಲಾಗುತ್ತಿದ್ದು, ಬ್ಯಾಂಕ್‌ಗಳಿಗೆ ಮರುಪಾವತಿ ಮಾಡ ಲಾಗುವುದು. ಹಂತ ಹಂತವಾಗಿ ಇತರೆ ಜಿಲ್ಲೆ ಗಳ ರೈತರ ಸಾಲದ ಸ್ಪಷ್ಟ ಮಾಹಿತಿ ಪಡೆದು ರಾಷ್ಟ್ರೀಕೃತ ಬ್ಯಾಂಕ್‌ಗಳಿಗೆ ಮರುಪಾವತಿ ಮಾಡಲಾಗುವುದೆಂದು ಸ್ಪಷ್ಟಪಡಿಸಿದರು. 

ಸಾಲಮನ್ನಾ ಯೋಜನೆಯು ಪಾರದರ್ಶಕ ವಾಗಿ ನಡೆಯಬೇಕು ಎಂಬ ಉದ್ದೇಶದಿಂದ ಹಿರಿಯ ಐಎಎಸ್ ಅಧಿಕಾರಿ ಮನಿಶ್ ಮೌದ್ಗಿಲ್ ಅವರನ್ನು ಸಾಲಮನ್ನಾ ಯೋಜ ನೆಯ ಸಮನ್ವಯಾಧಿಕಾರಿಯಾಗಿ ನಿಯೋಜಿಸಲಾಗಿದೆ. ಅವರು ಗುರುವಾರ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ಜತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚಿಸಿ ಗೊಂದಲಗಳನ್ನು ಬಗೆಹರಿಸಲಿದ್ದಾರೆ ಎಂದು ಹೇಳಿದರು. 

ಡಿ. 1ರೊಳಗೆ ರೈತರ ಸಾಲಮನ್ನಾಕ್ಕೆ ಸಂಬಂಧಿಸಿದಂತೆ ಎಲ್ಲಾ ಮಾಹಿತಿಯನ್ನು ಸಂಗ್ರಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಡಿ.೫ರಿಂದ ರಾಷ್ಟ್ರೀಕೃತ ಮತ್ತು ಸಹಕಾರಿ ಬ್ಯಾಂಕ್‌ಗಳ ಸಾಲಮನ್ನಾ ಪ್ರಕ್ರಿಯೆ ಆರಂಭಿಸಲಾಗುವುದು.  33 ರಾಷ್ಟ್ರೀಕೃತ  ಬ್ಯಾಂಕ್‌ಗಳ ಆರೂವರೆ ಸಾವಿರ ಶಾಖೆಗಳಿಂದ 20.80 ಲಕ್ಷ ರೈತರ ಬೆಳೆ ಸಾಲ ಕುರಿತು ಮಾಹಿತಿ ಕ್ರೋಢೀಕರಿಸಲಾಗಿದೆ. ಅಂತೆಯೇ ಸಹಕಾರ ಕ್ಷೇತ್ರದಲ್ಲಿ 21 ಲಕ್ಷ ರೈತರ ಬೆಳೆ ಸಾಲದ ಮಾಹಿತಿ ಸಂಗ್ರಹಿಸಲಾಗಿದೆ. ಮಾಹಿತಿ ಕ್ರೋಢೀಕರಣ ಮಾಡುವಲ್ಲಿ ಶೇ.92ರಷ್ಟು ಸಾಧನೆ ಮಾಡಲಾಗಿದೆ.