ಜಿಲ್ಲಾ ಮಂತ್ರಿ ಸ್ಥಾನ ಯಾರಿಗೆ..?

First Published 22, Jun 2018, 8:33 AM IST
CS Puttaraju May Get Mandya Incharge Post
Highlights

ಜಿಲ್ಲಾ ಉಸ್ತುವಾರಿ ಸಚಿವರ ನೇಮಕದ ಬಗ್ಗೆ ಮುಂದಿನ ಎರಡು ಅಥವಾ ಮೂರು ದಿನದೊಳಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ತಿಳಿಸಿದ್ದಾರೆ. 

ಮಂಡ್ಯ: ಜಿಲ್ಲಾ ಉಸ್ತುವಾರಿ ಸಚಿವರ ನೇಮಕದ ಬಗ್ಗೆ ಮುಂದಿನ ಎರಡು ಅಥವಾ ಮೂರು ದಿನದೊಳಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ತಿಳಿಸಿದ್ದಾರೆ. 

ನಗರದಲ್ಲಿ ಗುರುವಾರ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಮಂಡ್ಯ ಜಿಲ್ಲೆಗೆ ಸಚಿವ ಸಿ.ಎಸ್.ಪುಟ್ಟರಾಜು ಅವರನ್ನು ಜಿಲ್ಲಾ ಮಂತ್ರಿ ಮಾಡಲಾಗುವುದು ಎಂದು ಹೇಳಿದರು. ಈ ಬಗ್ಗೆ ಯಾವುದೇ ಅನುಮಾನ ಬೇಡ. ಜನರ ಆಶಯಕ್ಕೆ ತಕ್ಕಂತೆ ನಿರ್ಧಾರಗಳನ್ನು ಕೈಗೊಳ್ಳಲಾಗುವುದು ಎಂದರು.

loader