ತಪ್ಪಿದ ಸಚಿವ ಸ್ಥಾನ : ಇನ್ನೋರ್ವ ಕಾಂಗ್ರೆಸ್ ಮುಖಂಡರಿಂದ ರಾಜೀನಾಮೆ..?

CS Shivalli Decide To Resign To MLA Post
Highlights

ಇಂದು ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರದಿಂದ 23 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.  ಇದೇ ವೇಳೆ ಅನೇಕರು ತಮ್ಮನ್ನು ಸಚಿವ ಸ್ಥಾನಕ್ಕೆ ಪರಿಗಣಿಸದ ಹಿನ್ನೆಲೆ ಅಸಮಾಧಾನಗೊಂಡು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಚಿಂತನೆ ನಡೆಸುತ್ತಿದ್ದಾರೆ. 

ಬೆಂಗಳೂರು : ಜೆಡಿಎಸ್ ಹಾಗೂ ಕಾಂಗ್ರೆಸ್‌ ಮೈತ್ರಿ ಸರ್ಕಾರದಲ್ಲಿ ಪ್ರಮುಖ ನಾಯಕರು ಇಂದು ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡುತ್ತಿದ್ದಾರೆ. ಕಾಂಗ್ರೆಸ್ ನಿಂದ 15 ಮಂದಿ ಹಾಗೂ ಜೆಡಿಎಸ್ ನಿಂದ 8 ಮಂದಿ ಇಂದು ಸಚಿವರಾಗಿ ಪದಗ್ರಹಣ ಮಾಡಲಿದ್ದಾರೆ. 

ಇದೇ ವೇಳೆ ಕೆಲವರು ತಮ್ಮನ್ನು ಸಚಿವ ಸ್ಥಾನಕ್ಕೆ ಪರಿಗಣಿಸದ ಹಿನ್ನೆಲೆ ಅಸಮಾಧಾನಗೊಂಡು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಚಿಂತನೆ ನಡೆಸುತ್ತಿದ್ದಾರೆ. 

ಕುಂದಗೋಳದ ಕಾಂಗ್ರೆಸ್ ಶಾಸಕ ಸಿ.ಎಸ್ ಶಿವಳ್ಳಿ ಅವರು ಬೆಂಬಲಿಗರ ಅಭಿಪ್ರಾಯದಂತೆ ರಾಜೀನಾಮೆ ನೀಡಲು ಚಿಂತನೆ ನಡೆಸಿದ್ದಾರೆ.  ಈಗಾಗಲೇ ಎಂ.ಬಿ ಪಾಟೀಲ್ ಕೂಡ ತಮ್ಮನ್ನು ಸಚಿವ ಸ್ಥಾನಕ್ಕೆ ಪರಿಗಣಿಸದ ಹಿನ್ನೆಲೆಯಲ್ಲಿ ರಾಜೀನಾಮೆ ನೀಡುವತ್ತ ಚಿಂತನೆ ನಡೆಸಿದ್ದಾರೆ.  

ಕಾಂಗ್ರೆಸ್‌ ಇಬ್ಬರು ಮುಖಂಡರು ಅಸಮಾಧಾನ ಗೊಂಡು ಇದೀಗ ಶಾಸಕ ಸ್ಥಾನ ತೊರೆಯುವತ್ತ ಮನಸ್ಸು ಮಾಡುತ್ತಿದ್ದಾರೆ. 

loader