ನವದೆಹಲಿ :  ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿಯನ್ನು ಮುರುಳೀಧರ್‌ ರಾವ್‌ ಮತ್ತು ರಾಜಸ್ಥಾನದ ಮಾಜಿ ಸಚಿವೆ ಕಿರಣ್‌ ಮಹೇಶ್ವರಿ ಅವರು ನಿರ್ವಹಿಸಲಿದ್ದಾರೆ.

ಸದ್ಯ ರಾಜ್ಯ ಬಿಜೆಪಿಯ ಉಸ್ತುವಾರಿಯನ್ನು ಮುರುಳೀಧರ್‌ ರಾವ್‌ ಅವರೇ ನಿರ್ವಹಿಸುತ್ತಿದ್ದಾರೆ. ಚುನಾವಣೆ ವೇಳೆ ಮಾಜಿ ಸಂಸದೆಯೂ ಆಗಿರುವ ಕಿರಣ್‌ ಮಹೇಶ್ವರಿ ಸಹ ಪ್ರಭಾರಿ ಆಗಿ ಕಾರ್ಯ ನಿರ್ವಹಿಸಲಿದ್ದಾರೆ. ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಆಮಿತ್‌ ಶಾ ಅವರ ಸೂಚನೆಯಂತೆ ಈ ನೇಮಕ ನಡೆದಿದೆ ಎಂದು ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್‌ ಅವರು ಶನಿವಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಮಿಳುನಾಡಿಗೆ ಸಿಟಿ ರವಿ ಸಹ ಪ್ರಭಾರಿ :  ರಾಜ್ಯ ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರನ್ನು ತಮಿಳುನಾಡು, ಪುದುಚೇರಿ ಮತ್ತು ಅಂಡಮಾನ್‌ ನಿಕೋಬಾರ್‌ಗೆ ಸಹ ಪ್ರಭಾರಿಯನ್ನಾಗಿ ನೇಮಿಸಲಾಗಿದೆ. ಈ ರಾಜ್ಯಗಳ ಬಿಜೆಪಿ ಚುನಾವಣಾ ಉಸ್ತುವಾರಿಯನ್ನು ಕೇಂದ್ರ ಸಚಿವ ಪಿಯೂಷ್‌ ಗೊಯೆಲ್ ನಿರ್ವಹಿಸಲಿದ್ದಾರೆ.