ಸೋನಿಯಾ ಗಾಂಧಿ ನಿಜವಾಗಿಯೂ ಚಿಕಿತ್ಸೆಗಾಗಿ ವಿದೇಶಕ್ಕೆ ಹೋಗಿದ್ದಾರೋ ಅಥವಾ ಹಣವನ್ನು ಸುರಕ್ಷಿತ ಸ್ಥಳಗಳಿಗೆ ವರ್ಗಾಯಿಸಲೋ ಎಂದು ಸಿ.ಟಿ.ರವಿ ಟ್ವೀಟ್ ಮಾಡಿದ್ದಾರೆ.
ಬೆಂಗಳೂರು (ಮಾ.10): ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಚಿಕಿತ್ಸೆಗಾಗಿ ವಿದೇಶಕ್ಕೆ ಹೋಗಿರುವುದರ ವಿರುದ್ಧ ಬಿಜೆಪಿ ಮುಖಂಡ ಸಿ.ಟಿ.ರವಿ ಕಿಡಿಕಾರಿದ್ದಾರೆ.
ಸೋನಿಯಾ ಗಾಂಧಿ ನಿಜವಾಗಿಯೂ ಚಿಕಿತ್ಸೆಗಾಗಿ ವಿದೇಶಕ್ಕೆ ಹೋಗಿದ್ದಾರೋ ಅಥವಾ ಹಣವನ್ನು ಸುರಕ್ಷಿತ ಸ್ಥಳಗಳಿಗೆ ವರ್ಗಾಯಿಸಲೋ ಎಂದು ಟ್ವೀಟ್ ಮಾಡಿದ್ದಾರೆ.
ನಾಚಿಕೆಗೆಟ್ಟ ಗಾಂಧಿ ಕುಟುಂಬವು 6 ದಶಕಗಳ ಕಾಲ ಭಾರತದಲ್ಲಿ ಆಡಲಿತ ನಡೆಸಿದರೂ, ಸೋನಿಯಾ ಗಾಂಧಿಗೆ ಚಿಕಿತ್ಸೆ ನೀಡುವಂತಹ ಆಸ್ಪತ್ರೆಯನ್ನು ಕಟ್ಟಲಾಗಿಲ್ಲ ಎಂದು ಸಿ.ಟಿ.ರವಿ ಹೇಳಿದ್ದಾರೆ.
ರಾಹುಲ್ ಗಾಂಧಿ ತನ್ನ ತಾಯಿ ಸೋನಿಯಾ ಅವರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಯಾಕೆ ದಾಖಲಿಸಬಾರದು? ಸಿಎಂ (ಸಿದ್ದರಾಮಯ್ಯ) ಅವರ ಚೆನ್ನಾಗಿ ಆರೈಕೆ ಮಾಡುತ್ತಾರೆ ಎಂದು ರವಿ ಹೇಳಿದ್ದಾರೆ.
