ನೆನ್ನೆ ಗ್ರಾಮದ ವಿವಾದಿತ ಸ್ಥಳದಲ್ಲಿ ಮಸೀದಿ ನಿರ್ಮಾಣಕ್ಕೆ ಮುಂದಾಗಿರುವುದರಿಂದ  ನಿರ್ಮಾಣವಾಗಿದ್ದ  ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು,  ಶ್ರೀರಂಗಪಟ್ಟಣ ತಾಲೂಕಿನ ಬೊಮ್ಮೂರು ಅಗ್ರಹಾರದ ವಿವಾದಿತ ಸ್ಥಳದ ಬಳಿ 144 ನಿಷೇಧಾಜ್ಞೆ ಜಾರಿ ಮಾಡಲಾಗಿದೆ. 

ಮಂಡ್ಯ (ಜ.10): ನೆನ್ನೆ ಗ್ರಾಮದ ವಿವಾದಿತ ಸ್ಥಳದಲ್ಲಿ ಮಸೀದಿ ನಿರ್ಮಾಣಕ್ಕೆ ಮುಂದಾಗಿರುವುದರಿಂದ ನಿರ್ಮಾಣವಾಗಿದ್ದ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಶ್ರೀರಂಗಪಟ್ಟಣ ತಾಲೂಕಿನ ಬೊಮ್ಮೂರು ಅಗ್ರಹಾರದ ವಿವಾದಿತ ಸ್ಥಳದ ಬಳಿ 144 ನಿಷೇಧಾಜ್ಞೆ ಜಾರಿ ಮಾಡಲಾಗಿದೆ. 

ಜ. 09 ರಿಂದ ಜ. 31 ರವರೆಗೆ ವಿವಾದಿತ ಸ್ಥಳದ 500 ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ವಿವಾದಿತ ಸ್ಥಳದ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಶ್ರೀರಂಗಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಏನಿದು ಘಟನೆ?
ಮಂಡ್ಯ ಜಿಲ್ಲೆಯ ಗ್ರಾಮವೊಂದರಲ್ಲಿ‌ ಮಸೀದಿ ನಿರ್ಮಾಣಕ್ಕೆ ಮುಂದಾದ ಮುಸ್ಲಿಂರ ವಿರುದ್ಧ ಸ್ಥಳೀಯ ಗ್ರಾಮದ ಹಿಂದೂಗಳು ಸಿಡಿದೆದ್ದಿದ್ದಾರೆ. ಇದರಿಂದಾಗಿ ಗ್ರಾಮದಲ್ಲಿ ಉದ್ವಿಗ್ನ ಸ್ಥಿತಿ‌ ನಿರ್ಮಾಣವಾಗಿದೆ. ಇಲ್ಲಿನ ಶ್ರೀರಂಗಪಟ್ಟಣ ತಾಲೂಕಿನ ಬೊಮ್ಮೂರು ಅಗ್ರಹಾರ ಗ್ರಾಮದಲ್ಲಿ ಕಳೆದ ಐದು ವರ್ಷಗಳ ಹಿಂದೆ ಅನಾಥ ಮುಸ್ಲಿಂ ಬಾಲಕರ ಶಾಲೆ ನಡೆಸುವುದಾಗಿ ಮುಸ್ಲಿಂ ಸಂಸ್ಥೆಯೊಂದು ಅನುಮತಿ ಪಡೆದುಕೊಂಡಿತ್ತು. ಈ ಸ್ಥಳದಲ್ಲಿ ಈಗಾಗಲೇ ಮುಸ್ಲಿಂ ಅನಾಥ ಮಕ್ಕಳ ಶಾಲೆ ಇದ್ದು, ಈ ಶಾಲೆ ನಡೆಸುತ್ತಿದ್ದ ಸಂಸ್ಥೆಯ ಮುಸ್ಲಿಂ ಮುಖಂಡರು ರಾತ್ರೋ ರಾತ್ರಿ ಗ್ರಾಮದಲ್ಲಿ‌ ಗ್ರಾ.ಪಂ. ಲೈಸನ್ಸ್ ಪಡೆಯದೆ ಶಾಲೆ ಕಟ್ಟಡದ ಹೆಸರಲ್ಲಿ ಮಸೀದಿ ನಿರ್ಮಾಣಕ್ಕೆ ಮುಂದಾದರು. ಇದು ಈಗ ಸ್ಥಳೀಯ ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.