ಕಾಂಗ್ರೆಸ್ ಹೈಕಮಾಂಡ್ ಸೋನಿಯಾ ಗಾಂಧಿ ಅನಾರೋಗ್ಯ ಕಾರಣದಿಂದ ಅವರ ಅನುಪಸ್ಥಿತಿಯಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಅಧ್ಯಕ್ಷತೆಯನ್ನು ಮೊದಲ ಬಾರಿಗೆ ರಾಹುಲ್ ಗಾಂಧಿ ವಹಿಸಿದ್ದರು.
ದೆಹಲಿ (ನ.07): ಕಾಂಗ್ರೆಸ್ ಹೈಕಮಾಂಡ್ ಸೋನಿಯಾ ಗಾಂಧಿ ಅನಾರೋಗ್ಯ ಕಾರಣದಿಂದ ಅವರ ಅನುಪಸ್ಥಿತಿಯಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಅಧ್ಯಕ್ಷತೆಯನ್ನು ಮೊದಲ ಬಾರಿಗೆ ರಾಹುಲ್ ಗಾಂಧಿ ವಹಿಸಿದ್ದರು.
ರಾಹುಲ್ ಗಾಂಧಿ ಪಕ್ಷದ ನೇತೃತ್ವ ವಹಿಸಿಕೊಳ್ಳುತ್ತಾರಾ ಎನ್ನುವ ಅನುಮಾನದ ನಡುವೆಯೇ ಪಕ್ಷದ ಕಾರ್ಯಕರ್ತರೆಲ್ಲ ಇವತ್ತು ಒಂದೆಡೆ ಸೇರಿ ಸಭೆ ನಡೆಸಿದರು. ಪಕ್ಷದ ನೇತೃತ್ವ ವಹಿಸುಕೊಳ್ಳುವಂತೆ ಕಾರ್ಯಕರ್ತರು ಒತ್ತಾಯಿಸಿದರು.
ಸಭೆಯಲ್ಲಿ ಉಪಸ್ಥಿತರಿದ್ದ ಪಕ್ಷದ ಹಿರಿಯ ಮುಖಂಡ ಎ.ಕೆ ಆ್ಯಂಟನಿ, ಪಕ್ಷದ ಅಧ್ಯಕ್ಷತೆಯನ್ನು ವಹಿಸಿಕೊಳ್ಳಲು ಸರಿಯಾದ ಸಮಯ ಎಂದು ಅಭಿಪ್ರಾಯಪಟ್ಟರು. ಇದಕ್ಕೆ ಪಕ್ಷದ ಉಳಿದ ಸದಸ್ಯರು ಸಮ್ಮತಿ ಸೂಚಿಸಿದರು.
ಇದೇ ಸಂದರ್ಭದಲ್ಲಿ ರಾಹುಲ್ ಗಾಂಧಿ ಮೋದಿ ಸರ್ಕಾರದ ವೈಫಲ್ಯಗಳ ಬಗ್ಗೆ ಟೀಕಿಸುತ್ತಾ ಈ ಬಾರಿಯ ಚಳಿಗಾಲದ ಸಂಸತ್ ಅಧಿವೇಶನದಲ್ಲಿ ಪ್ರಸ್ತಾಪಿಸಲಾಗುವುದು ಎಂದು ಹೇಳಿದರು.
