ರಾಜ್ಯದ ಕೆಲ ಭಾಗದಲ್ಲಿ ಈ ವಾರ ಮಳೆ ಸಾಧ್ಯತೆ. ಎಲ್ಲೆಲ್ಲಿ ಎನ್ನುವ ವಿವರ ಇಲ್ಲಿದೆ.

ಬೆಂಗಳೂರು, [ಅ.15]: ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಅ. 19ರ ವರೆಗೆ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ತಿಳಿಸಿದೆ.

ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿ ಕಳೆದ ವಾರ ರಾಜ್ಯದ ಕೆಲ ಭಾಗದಲ್ಲಿ ಮಳೆಯಾಗಿತ್ತು. ವಾಯುಭಾರದ ಕುಸಿತ ಪ್ರಭಾವ ಕಡಿಮೆಯಾಗುತ್ತಿದ್ದಂತೆ ಮಳೆ ಪ್ರಮಾಣ ಕಡಿಮೆಯಾಗಿತ್ತು.

ಇದೀಗ ಮತ್ತೆ ಅರಬ್ಬಿ ಮತ್ತು ಬಂಗಾಳಕೊಲ್ಲಿಯ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದೆ ಎಂದು ಕೆಎಸ್‌ಎನ್‌ಡಿಎಂಸಿ ನಿರ್ದೇಶಕ ಶ್ರೀನಿವಾಸ್ ರೆಡ್ಡಿ ತಿಳಿಸಿದ್ದಾರೆ