ಶೀಘ್ರದಲ್ಲೇ ವಿಧಾನ ಪರಿಷತ್ ಸಭಾಪತಿ ಡಿ. ಎಚ್.ಶಂಕರಮೂರ್ತಿಯವರು ರಾಜ್ಯಪಾಲ ಹುದ್ದೆಗೇರುವ ಸಾಧ್ಯತೆಯಿದೆ. ಮಹಾರಾಷ್ಟ್ರ, ಮಧ್ಯಪ್ರದೇಶ, ಆಂಧ್ರಪ್ರದೇಶ, ತಮಿಳುನಾಡು ರಾಜ್ಯಗಳ ಪೈಕಿ ಒಂದು ರಾಜ್ಯಕ್ಕೆ ರಾಜ್ಯಪಾಲರಾಗಿ ನೇಮಕವಾಗುವ ಸಾಧ್ಯತೆಯಿದೆ.
ಬೆಂಗಳೂರು (ಡಿ. 23): ಶೀಘ್ರದಲ್ಲೇ ವಿಧಾನ ಪರಿಷತ್ ಸಭಾಪತಿ ಡಿ. ಎಚ್.ಶಂಕರಮೂರ್ತಿಯವರು ರಾಜ್ಯಪಾಲ ಹುದ್ದೆಗೇರುವ ಸಾಧ್ಯತೆಯಿದೆ. ಮಹಾರಾಷ್ಟ್ರ, ಮಧ್ಯಪ್ರದೇಶ, ಆಂಧ್ರಪ್ರದೇಶ, ತಮಿಳುನಾಡು ರಾಜ್ಯಗಳ ಪೈಕಿ ಒಂದು ರಾಜ್ಯಕ್ಕೆ ರಾಜ್ಯಪಾಲರಾಗಿ ನೇಮಕವಾಗುವ ಸಾಧ್ಯತೆಯಿದೆ.
ಶಂಕರಮೂರ್ತಿ ನಿನ್ನೆ ಈ ಬಗ್ಗೆ ದೆಹಲಿಯಲ್ಲಿ ಗೃಹಸಚಿವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ದಕ್ಷಿಣ ಭಾರತದ ಯಾವುದಾದರೂ ಒಂದು ರಾಜ್ಯಕ್ಕೆ ರಾಜ್ಯಪಾಲರಾಗಲು ಶಂಕರಮೂರ್ತಿ ಆಸಕ್ತರಾಗಿದ್ದಾರೆ.
