ರಾಜ್ಯ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಗೆ ಬಿಗ್ ರಿಲೀಫ್ ಸಿಕ್ಕಿದೆ. 

ಬೆಂಗಳೂರು, (ಸೆ.14): ರಾಜ್ಯ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಗೆ ಬಿಗ್ ರಿಲೀಫ್ ಸಿಕ್ಕಿದೆ. ದೆಹಲಿಯ ಹವಾಲಾ ಕೇಸ್ ಪ್ರಕರಣದಲ್ಲಿ ಡಿ.ಕೆ. ಶಿವಕುಮಾರ್ ಗೆ ಜಾಮೀನು ಸಿಕ್ಕಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ದೆಹಲಿಯ ಹವಾಲಾ ಕೇಸ್ ನಲ್ಲಿ ಜಾಮೀನು ನೀಡುವಂತೆ ಆರ್ಥಿಕ ಅಪರಾಧಗಳ ನ್ಯಾಯಾಲಯಕ್ಕೆ ಡಿಕೆಶಿ ಅರ್ಜಿ ಸಲ್ಲಿಸಿದ್ದರು. ಅದರಂತೆ ಇಂದು ಅರ್ಜಿ ವಿಚಾರಣೆ ನಡೆಸಿದ ಆರ್ಥಿಕ ಅಪರಾಧಗಳ ನ್ಯಾಯಾಲಯ, ಡಿ.ಕೆ.ಶಿವಕುಮಾರ್ ಗೆ ಷರತ್ತುಬದ್ಧ ಜಾಮೀನು ನೀಡಿ ಆದೇಶ ಹೊರಡಿಸಿದೆ.

ಇದೇ ಪ್ರಕರಣದಲ್ಲಿ ಡಿಕೆಶಿ ಸೇರಿದಂತೆ 5 ಜನರಿಗೆ ಜಾಮೀನು ಸಿಕ್ಕಿದ್ದು, ತಲಾ 520 ಸಾವಿರ ರು. ಬಾಂಡ್ ಮತ್ತು ಇಬ್ಬರ ಶೂರಿಟಿ ನೀಡಬೇಕೆಂದು ಕೋರ್ಟ್ ಸೂಚಿಸಿದೆ.