ಡಿಕೆಶಿಗೆ ಬಿಗ್ ರಿಲೀಫ್; ಬಂಧನದ ಭೀತಿಯಿಂದ ಪಾರು

D K Shivkumar Gets Bail
Highlights

ಐಟಿ ದಾಳಿ ವೇಳೆ ಸಾಕ್ಷ್ಯ ನಾಶಕ್ಕೆ ಯತ್ನಿಸಿದ್ದಾರೆ ಎನ್ನುವ ಆರೋಪದಲ್ಲಿ ಇಂದು ಡಿ ಕೆ ಶಿವಕುಮಾರ್’ಗೆ ಬಿಗ್ ರಿಲೀಫ್ ಸಿಕ್ಕಿದೆ.

ಬೆಂಗಳೂರು (ಮಾ. 22): ಐಟಿ ದಾಳಿ ವೇಳೆ ಸಾಕ್ಷ್ಯ ನಾಶಕ್ಕೆ ಯತ್ನಿಸಿದ್ದಾರೆ ಎನ್ನುವ ಆರೋಪದಲ್ಲಿ ಇಂದು ಡಿ ಕೆ ಶಿವಕುಮಾರ್’ಗೆ ಬಿಗ್ ರಿಲೀಫ್ ಸಿಕ್ಕಿದೆ. 

ಇಂಧನ ಸಚಿವ ಡಿ.ಕೆ.ಶಿವಕುಮಾರ್’ಗೆ  ನ್ಯಾಯಾಲಯ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಬಂಧನದ ಭೀತಿಯಿಂದ ಪಾರಾಗಿದ್ದಾರೆ. ತನಿಖೆಗೆ ಸಹಕಾರ ನೀಡಬೇಕು.  25 ಸಾವಿರ ರೂಪಾಯಿ ನಗದು ಹಾಗೂ ಇಬ್ಬರ ಶ್ಯೂರಿಟಿ ಹಾಗೂ  ಸಾಕ್ಷ್ಯ ನಾಶ ಮಾಡಬಾರದೆಂದು ಷರತ್ತಿನೊಂದಿಗೆ ಜಾಮೀನು ನೀಡಿದೆ. 
ಡಿಕೆಶಿಗೆ ಬೇಲ್ ಸಿಗುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಿಸಿದ್ದಾರೆ. 

loader