ಚುನಾವಣೆಗೂ ಮುನ್ನ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಕಿತ್ತಾಟ; ಮೋಯ್ಲಿ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

First Published 21, Mar 2018, 1:04 PM IST
Dalit Organisation Protest against Congress Leader Veerappa Moily
Highlights

ಚುನಾವಣೆಗೂ ಮುನ್ನವೇ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಆರೋಪ ಪ್ರತ್ಯಾರೋಪ ಜೋರಾಗಿದೆ. 

ಬೆಂಗಳೂರು (ಮಾ. 21): ಚುನಾವಣೆಗೂ ಮುನ್ನವೇ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಆರೋಪ ಪ್ರತ್ಯಾರೋಪ ಜೋರಾಗಿದೆ. 
ಮಹಾದೇವಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ನಾಯಕರ ಅಸಮಾಧಾನ ಭುಗಿಲೆದ್ದಿದೆ.  ಕಳೆದ ಬಾರಿಯ ಅಭ್ಯರ್ಥಿ ಎ.ಸಿ.ಶ್ರೀನಿವಾಸ್ ಮತ್ತು ವೀರಪ್ಪ ಮೊಯ್ಲಿ ವಿರುದ್ಧ ದಲಿತ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದಾರೆ. 

ವೀರಪ್ಪ ಮೊಯ್ಲಿ ವಿರುದ್ಧ ಬೆಂಗಳೂರಿನಲ್ಲಿ ದಲಿತ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಮಹಾದೇವಪುರ ಕ್ಷೇತ್ರದಲ್ಲಿ ಸ್ಥಳೀಯರಿಗೆ ಅವಕಾಶ ನೀಡುವಂತೆ ಆಗ್ರಹಿಸಿವೆ. ಕಳೆದ ಬಾರಿಯ ಅಭ್ಯರ್ಥಿ ಎ.ಸಿ.ಶ್ರೀನಿವಾಸ್ ಪರವಾಗಿರುವ ವೀರಪ್ಪ ಮೊಯ್ಲಿ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.  ವೀರಪ್ಪ ಮೊಯ್ಲಿ ಅವರು ಸ್ಥಳೀಯರಲ್ಲದ ಎ.ಸಿ.ಶ್ರಿನಿವಾಸ್ ಪರ ಬ್ಯಾಟಿಂಗ್ ಮಾಡುತ್ತಿದ್ದಾರೆ. ಸ್ಥಳೀಯ ದಲಿತ ನಾಯಕರ ವಿರುದ್ಧ ವೀರಪ್ಪ ಮೊಯ್ಲಿ ಕೆಲಸ ಮಾಡುತ್ತಿದ್ದಾರೆ. ತಕ್ಷಣವೇ ಮೊಯ್ಲಿಯನ್ನು ಚುನಾವಣಾ ಪ್ರಣಾಳಿಕೆ ಸಮಿತಿ ಅಧ್ಯಕ್ಷ ಸ್ಥಾನದಿಂದ ವಜಾ ಮಾಡಬೇಕು. ಎ.ಸಿ.ಶ್ರೀನಿವಾಸ ಬದಲು ಸ್ಥಳೀಯರಿಗೆ ಮಹಾದೇವಪುರದಲ್ಲಿ ಟಿಕೆಟ್ ನೀಡಬೇಕು ಎಂದು ಆಗ್ರಹಿಸಿ  ಬೆಂಗಳೂರಿನ ಮೌರ್ಯ ಹೊಟೇಲ್ ಸರ್ಕಲ್ ಬಳಿ  ದಲಿತ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. 
 

loader