ಇಂದಿನಿಂದ ನಾಡಿನಾದ್ಯಂತ ನವರಾತ್ರಿ ಉತ್ಸವ ಆರಂಭವಾಗಿದೆ. 9 ದಿನಗಳ ಕಾಲ ನಡೆಯುವ ಉತ್ಸವ ಇದೇ 30 ರಂದು ವಿಜಯದಶಮಿಯಂದು ಜಂಬೂಸವಾರಿಯೊಂದಿಗೆ ಮುಕ್ತಾಯವಾಗಲಿದೆ. ದೇವಾಲಯಗಳಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನಡೆಯುತ್ತಿವೆ. ನಾಡಹಬ್ಬ, ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ನಿತ್ಯೋತ್ಸವ ಕವಿ, ಸಾಹಿತಿ ಕೆ.ಎಸ್.ನಿಸಾರ್ ಅಹಮದ್ ಅವರು ಬೆಳಗ್ಗೆ 8:45ಕ್ಕೆ ಚಾಮುಂಡಿಬೆಟ್ಟದಲ್ಲಿ ಶ್ರೀ ಚಾಮುಂಡೇಶ್ವರಿ ದೇವಿಗೆ ಶುಭ ತುಲಾ ಲಗ್ನದಲ್ಲಿ ಅಗ್ರಪೂಜೆ ಸಲ್ಲಿಸಿ ಚಾಲನೆ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತಿತರ ಗಣ್ಯರು ಈ ಸಂದರ್ಭಕ್ಕೆ ಸಾಕ್ಷಿಯಾದರು.

ಮೈಸೂರು(ಸೆ.21): ಇಂದಿನಿಂದ ನಾಡಿನಾದ್ಯಂತ ನವರಾತ್ರಿ ಉತ್ಸವ ಆರಂಭವಾಗಿದೆ. 9 ದಿನಗಳ ಕಾಲ ನಡೆಯುವ ಉತ್ಸವ ಇದೇ 30 ರಂದು ವಿಜಯದಶಮಿಯಂದು ಜಂಬೂಸವಾರಿಯೊಂದಿಗೆ ಮುಕ್ತಾಯವಾಗಲಿದೆ. ದೇವಾಲಯಗಳಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನಡೆಯುತ್ತಿವೆ. ನಾಡಹಬ್ಬ, ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ನಿತ್ಯೋತ್ಸವ ಕವಿ, ಸಾಹಿತಿ ಕೆ.ಎಸ್.ನಿಸಾರ್ ಅಹಮದ್ ಅವರು ಬೆಳಗ್ಗೆ 8:45ಕ್ಕೆ ಚಾಮುಂಡಿಬೆಟ್ಟದಲ್ಲಿ ಶ್ರೀ ಚಾಮುಂಡೇಶ್ವರಿ ದೇವಿಗೆ ಶುಭ ತುಲಾ ಲಗ್ನದಲ್ಲಿ ಅಗ್ರಪೂಜೆ ಸಲ್ಲಿಸಿ ಚಾಲನೆ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತಿತರ ಗಣ್ಯರು ಈ ಸಂದರ್ಭಕ್ಕೆ ಸಾಕ್ಷಿಯಾದರು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ, ಸಂಪುಟದ ಇತರ ಕೆಲ ಸಚಿವರು, ಗಣ್ಯರು ಈ ಸಂದರ್ಭದಲ್ಲಿ ಹಾಜರಿದ್ದರು. ಉದ್ಘಾಟನೆಗೂ ಮುನ್ನ ಮುಖ್ಯಮಂತ್ರಿಯವರು ಚಾಮುಂಡೇಶ್ವರಿ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿದರು.

ಇಂದು ನಸುಕಿನ ಜಾವ 4 ಗಂಟೆಯಿಂದಲೇ ಪುರೋಹಿತರು ಚಾಮುಂಡಿ ಬೆಟ್ಟದಲ್ಲಿ ಪೂಜಾ ವಿಧಿ ವಿಧಾನಗಳ ಸಿದ್ಧತೆಯಲ್ಲಿ ಮಗ್ನರಾಗಿದ್ದರು.ಪುರೋಹಿತರು ಚಾಮುಂಡೇಶ್ವರಿ ಮೂರ್ತಿಗೆ ಸ್ನಾನ ಮಾಡಿಸಿ ದೇವಿಗೆ ರೇಷ್ಮೆ ಸೀರೆ ಉಡಿಸಿದರು. ಬೆಳ್ಳಿ ರಥದಲ್ಲಿ ಅಲಂಕಾರಿಕ ಹೂವುಗಳಿಂದ ಅಲಂಕರಿಸಲಾಗಿದ್ದು, ಹಬ್ಬದ ಸಮಯದಲ್ಲಿ ದೇವಸ್ಥಾನಕ್ಕೆ ಸಾರ್ವಜನಿಕ ಭೇಟಿಗೆ ನಿರ್ಬಂಧ ಹೇರಲಾಗಿದೆ. 10 ದಿನ ಸಾಂಸ್ಕೃತಿಕ ವೈಭವ ಅನಾವರಣಗೊಳ್ಳಲಿದೆ. ಸೆ. 30 ರಂದು ಜಂಬೂಸವಾರಿ ನಡೆಯಲಿದೆ.