ಚಿಕ್ಕಮಗಳೂರು ಜಿಲ್ಲೆಯ ಚಂದ್ರದ್ರೋಣ ಪರ್ವತ, ಬಾಬಾಬುಡನ್‌ಗಿರಿಯಲ್ಲಿರುವ ಶ್ರೀಗುರುದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದಲ್ಲಿ ಡಿ.20 ರಿಂದ 22 ರವರೆಗೆ ದತ್ತ ಜಯಂತಿ ಅಭಿಯಾನ ನಡೆಯಲಿದೆ. 

ಚಿಕ್ಕಮಗಳೂರು (ಡಿ. 19): ಜಿಲ್ಲೆಯ ಚಂದ್ರದ್ರೋಣ ಪರ್ವತ, ಬಾಬಾಬುಡನ್‌ಗಿರಿಯಲ್ಲಿರುವ ಶ್ರೀಗುರುದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದಲ್ಲಿ ಡಿ.20 ರಿಂದ 22 ರವರೆಗೆ ದತ್ತ ಜಯಂತಿ ಅಭಿಯಾನ ನಡೆಯಲಿದೆ. 

ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳಾದ ಎಂ.ಕೆ.ಶ್ರೀರಂಗಯ್ಯ ನಿಬಂಧನೆಗಳನ್ನು ವಿಧಿಸಿ ಅಧಿಸೂಚನೆ ಹೊರಡಿಸಿದ್ದಾರೆ. ಭತ್ರತೆಗಾಗಿ 3200 ಪೊಲೀಸ್ ಸಿಬ್ಬಂದಿ ನೇಮಿಸಲಾಗಿದೆ. 43 ವಿಶೇಷ ದಂಡಾಧಿಕಾರಿಗಳನ್ನು ನಿಯೋಜಿಸಲಾಗಿದೆ.

ದತ್ತ ಜಯಂತಿ ಹಿನ್ನಲೆಯಲ್ಲಿ ಡಿ 19 ರಿಂದ 22 ರ ವರೆಗೆ ಮೂರು ದಿನಗಳ ಕಾಲ ಜಿಲ್ಲೆಯಾದ್ಯಂತ ಮದ್ಯಮಾರಾಟ ನಿಷೇಧ ಮಾಡಲಾಗಿದೆ ಎಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ಶ್ರೀರಂಗಯ್ಯ ಆದೇಶ ನೀಡಿದ್ದಾರೆ. 

ನಾಳೆಯಿಂದ ಮೂರು ದಿನ ದತ್ತಜಯಂತಿ ಆಚರಣೆ ಹಿನ್ನೆಲೆ ಮುನ್ನೆಚರಿಕಾ ಕ್ರಮವಾಗಿ ಮದ್ಯಮಾರಾಟ ನಿಷೇಧ ಮಾಡಲಾಗಿದೆ.