ಅಸಮಾಧಾನ : ಬದಲಾಗುತ್ತಾ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ..?

https://static.asianetnews.com/images/authors/56bf5dcb-7868-50e0-b2d0-38391a34809d.jpg
First Published 2, Aug 2018, 9:02 AM IST
DC Thammanna Not Happy With Shivamogga In Charge
Highlights

ಈಗಾಗಲೇ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರ ನೇಮಕ ಮಾಡಲಾಗಿದೆ. ಆದರೆ ಜಿಲ್ಲಾ ಉಸ್ತುವಾರಿಯಲ್ಲಿಯೂ ಕೂಡ ಅನೇಕರಿಂದ ಅಸಮಾಧಾನ ವ್ಯಕ್ತವಾಗಿದೆ.

ಮಂಡ್ಯ/ಮದ್ದೂರು: ನನಗೆ ಮಂಡ್ಯ ಸೇರಿದಂತೆ ಯಾವುದೇ ಜಿಲ್ಲೆಯ ಉಸ್ತುವಾರಿ ಸಚಿವ ಸ್ಥಾನ ಬೇಡ. ಆ ಸ್ಥಾನದ ಬಗ್ಗೆ ನನಗೆ ಆಸಕ್ತಿಯೂ ಇಲ್ಲ ಎಂದು ಸಾರಿಗೆ ಸಚಿವ ಡಿ.ಸಿ. ತಮ್ಮಣ್ಣ ಬುಧವಾರ ಮದ್ದೂರಿನಲ್ಲಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ತಮ್ಮಣ್ಣ ನಾನು ಮಂಡ್ಯ ಜಿಲ್ಲೆ ಸೇರಿದಂತೆ ರಾಜ್ಯದ ಯಾವುದೇ ಜಿಲ್ಲೆಯ ಉಸ್ತುವಾರಿಯನ್ನು ಬಯಸಿರಲಿಲ್ಲ. 

ಮುಖ್ಯಮಂತ್ರಿಗಳೇ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ನೀಡಿದ್ದಾರೆ. ನನಗೆ ಯಾವ ಜಿಲ್ಲೆಯ ಉಸ್ತುವಾರಿಯನ್ನೂ  ಹಿಸಿಕೊಳ್ಳುವುದಕ್ಕೆ ಆಸಕ್ತಿ ಇರಲಿಲ್ಲ. ಈ ವಿಷಯವನ್ನು ನಾನು ಸಿಎಂ ಎಚ್.ಡಿ. ಕುಮಾರಸ್ವಾಮಿ ಜತೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇನೆ ಎಂದರು.

ಬೆಟ್ಟದಷ್ಟು ಕೆಲಸ: ನನಗೆ ಸಾರಿಗೆ ಸಚಿವ ಹುದ್ದೆಯೇ ಸಾಕು. ಇಲ್ಲಿ ಮಾಡುವ ಕೆಲಸವೇ ಬೆಟ್ಟದಷ್ಟಿದೆ. ಜಿಲ್ಲಾ ಉಸ್ತುವಾರಿ ಸಚಿವ ಹುದ್ದೆ ಬಗ್ಗೆ ನನಗೆ ಯಾವುದೇ ಆಸಕ್ತಿ ಇಲ್ಲ ಎಂದರು.

loader