ಬೆಂಗಳೂರು[ಜು.26]  ಡಿಸಿಎಂ ಡಾ. ಜಿ. ಪರಮೇಶ್ವರ್ ಸಹೋದರ ಡಾ. ಶಿವಪ್ರಸಾದ್ ಗುರುವಾರ ಸಂಜೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಳೆದ ಆರು ತಿಂಗಳಿನಿಂದ ಅವರು ಕೋಮಾ ಸ್ಥಿತಿಯಲ್ಲಿದ್ದರು.

ತುಮಕೂರಿನ‌ ಸಿದ್ಧಾರ್ಥ ಶಿಕ್ಷಣ ಸಂಸ್ಥೆಗಳ‌ ಅಧ್ಯಕ್ಷರಾಗಿದ್ಧ ಡಾ. ಶಿವಪ್ರಸಾದ್ ಶಿಕ್ಷಣ ಕ್ಷೇತ್ರದಲ್ಲಿ ಅಪಾರ ಹೆಸರು ಗಳಿಸಿದ್ದರು. ಅವರಿಗೆ 70 ವರ್ಷ ವಯಸ್ಸಾಗಿತ್ತು.