ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ವರ್ತನೆಗೆ ಉಪ ಮುಖ್ಯಮಂತ್ರಿ ಪರಮೇಶ್ವರ್ ಗರಂ ಆಗಿದ್ದಾರೆ. ಸಾ.ರಾ ಮಹೇಶ್ ಅವರನ್ನು ತರಾಟೆಗೆ ತೆಗೆದುಕೊಂಡ ರೀತಿ ಸರಿಯಲ್ಲ ಎಂದು ಟ್ವಿಟ್ಟರ್ ನಲ್ಲಿ ಅಸಮಾಧಾನ ಹೊರಹಾಕಿದ್ದಾರೆ.
ಬೆಂಗಳೂರು : ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶುಕ್ರವಾರ ಸಚಿವ ಸಾ.ರಾ ಮಹೇಶ್ ಅವರ ವಿರುದ್ಧ ವಾಗ್ದಾಳಿ ನಡೆಸಿದ ಬಗ್ಗೆ ಕರ್ನಾಟಕ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್ ಅಸಮಾಧಾನ ಹೊರ ಹಾಕಿದ್ದಾರೆ.
ತಮ್ಮ ಸಹೋದ್ಯೋಗಿಯನ್ನು ನಿರ್ಮಲಾ ಸೀತಾರಾಮನ್ ಈ ರೀತಿ ತರಾಟೆಗೆ ತೆಗೆದುಕೊಂಡಿರುವು ತೀವ್ರ ಅಸಮಾಧಾನವನ್ನುಂಟು ಮಾಡಿದೆ ಎಂದು ಹೇಳಿದ್ದಾರೆ.
ವಾರಗಳ ಹಿಂದೆಯೇ ಸಚಿವರು ಕೊಡಗಿನಲ್ಲಿ ವಾಸ್ತವ್ಯ ಹೂಡಿ ಪ್ರವಾಹ ಸಂತ್ರಸ್ತರ ನೆರವಿಗೆ ನಿಂತಿದ್ದಾರೆ. ಜಿಲ್ಲಾಡಳಿತದೊಂದಿಗೆ ಕೊಡಗಿನ ನೆರವು ಕಾರ್ಯಾಚಾರಣೆಯಲ್ಲಿ ಪಾಲ್ಗೊಂಡಿದ್ದಾರೆ ಎಂದು ಹೇಳಿದ್ದಾರೆ.
ನಿರ್ಮಲಾ ಸೀತಾರಾಮನ್ ಅವರು ಬಾಸ್ ಅಲ್ಲ. ಅವರು ಕೇಂದ್ರದಿಂದ ಬಂದವರು. ರಾಜ್ಯ ಸರ್ಕಾರ ಇಂತಹ ಜವಾಬ್ದಾರಿಗಳನ್ನು ನಿರ್ವಹಣೆ ಮಾಡುತ್ತದೆ. ಕೇಂದ್ರದಿಂದ ಅಲ್ಲ. ನಾವೂ ಕೂಡ ಕೇಂದ್ರದ ಆಡಳಿತದಲ್ಲಿ ಮಧ್ಯ ಪ್ರವೇಶಿಸುವುದಿಲ್ಲ ಎಂದು ಹೇಳಿದ್ದಾರೆ.
ಪ್ರವಾಹ ಪೀಡಿತ ಕೊಡಗಿಗೆ ಶುಕ್ರವಾರ ಭೇಟಿ ನೀಡಿದ್ದ ಸಚಿವೆ ನಿರ್ಮಲಾ ಸೀತಾರಾಮನ್ ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ ಮಹೇಶ್ ಅವರ ಮೇಲೆ ಗರಂ ಆಗಿದ್ದರು. ನಾನು ನಿಮ್ಮ ಮಾತು ಕೇಳಬೇಕಾ ? ಕೇಂದ್ರ ಸಚಿವರು ಉಸ್ತುವಾರಿ ಸಚಿವರ ಮಾತು ಕೇಳಬೇಕೆಂದರೆ ನನಗೆ ನಂಬಲಾಗುತ್ತಿಲ್ಲ ಎಂದು ಅವರು ಹೇಳಿದ್ದರು.
"
