ವಿವಿಧ ಸೇವೆಗಳಿಗೆ ಆಧಾರ್ ಕಾರ್ಡ್ ಲಿಂಕ್ ಮಾಡುವುದಕ್ಕೆ ವಿಧಿಸಲಾಗಿರುವ ಗಡುವನ್ನು 2018ರ ಮಾರ್ಚ್ 31ರವರೆಗೆ ವಿಸ್ತರಿಸಲಾಗಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್’ಗೆ ತಿಳಿಸಿದೆ.

ನವದೆಹಲಿ(ಡಿ.8): ವಿವಿಧ ಸೇವೆಗಳಿಗೆ ಆಧಾರ್ ಕಾರ್ಡ್ ಲಿಂಕ್ ಮಾಡುವುದಕ್ಕೆ ವಿಧಿಸಲಾಗಿರುವ ಗಡುವನ್ನು 2018ರ ಮಾರ್ಚ್ 31ರವರೆಗೆ ವಿಸ್ತರಿಸಲಾಗಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್’ಗೆ ತಿಳಿಸಿದೆ. ಕೇಂದ್ರ ಸರ್ಕಾರದ ಯೋಜನೆಗಳ ಲಾಭ ಪಡೆದುಕೊಳ್ಳಲು ಆಧಾರ್ ಕಾರ್ಡ್’ನ್ನು ಲಿಂಕ್ ಮಾಡಬೇಕಿದೆ.

Add Asianetnews Kannada as a Preferred SourcegooglePreferred

ಹಲವು ರೀತಿಯ ಯೋಜನೆಗಳು, ಸೇವೆಗಳ ಫಲಾನುಭವಿಗಳು ಆಧಾರ್ ಕಾರ್ಡ್ ಲಿಂಕ್ ಮಾಡುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂಕೋರ್ಟ್ ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಿದ್ದು, ಕೇಂದ್ರ ಸರ್ಕಾರದ ಪರವಾಗಿ ವಾದ ಮಂಡಿಸುತ್ತಿರುವ ಅಟಾರ್ನಿ ಜನರಲ್ ಕೆ.ಕೆ ವೇಣುಗೋಪಾಲ್, ಆಧಾರ್ ಲಿಂಕ್ ಮಾಡುವುದಕ್ಕೆ ವಿಧಿಸಲಾಗಿರುವ ಗಡುವನ್ನು ಮಾರ್ಚ್ 31ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.