ಬಿಜೆಪಿ ಸಂಭಾವ್ಯ ಅಭ್ಯರ್ಥಿಗೆ ಜೀವ ಬೆದರಿಕೆ

First Published 28, Feb 2018, 12:18 PM IST
Death Threat To BJP Leader
Highlights

ಬಬಲೇಶ್ವರ ಕ್ಷೇತ್ರದಲ್ಲಿ ಬಿಜೆಪಿ ಸಂಭಾವ್ಯ ಅಭ್ಯರ್ಥಿ, ಬ.ಬಾಗೇವಾಡಿ ಕ್ಷೇತ್ರದ ಶಾಸಕ ಶಿವಾನಂದ ಪಾಟೀಲರ ಸಹೋದರ ವಿಜುಗೌಡ ಪಾಟೀಲರ ಕಾರು ಅಡ್ಡಗಟ್ಟಿದ ದುಷ್ಕರ್ಮಿಗಳು ಅವರಿಗೆ ಜೀವ ಬೆದರಿಕೆಯೊಡ್ಡಿರುವ ಘಟನೆ ಮಂಗಳವಾರ ನಗರದ ಆಕಾಶವಾಣಿ ಬಳಿಯಿರುವ ರಿಂಗ್ ರಸ್ತೆಯಲ್ಲಿ ಸಂಭವಿಸಿದೆ.

ವಿಜಯಪುರ: ಬಬಲೇಶ್ವರ ಕ್ಷೇತ್ರದಲ್ಲಿ ಬಿಜೆಪಿ ಸಂಭಾವ್ಯ ಅಭ್ಯರ್ಥಿ, ಬ.ಬಾಗೇವಾಡಿ ಕ್ಷೇತ್ರದ ಶಾಸಕ ಶಿವಾನಂದ ಪಾಟೀಲರ ಸಹೋದರ ವಿಜುಗೌಡ ಪಾಟೀಲರ ಕಾರು ಅಡ್ಡಗಟ್ಟಿದ ದುಷ್ಕರ್ಮಿಗಳು ಅವರಿಗೆ ಜೀವ ಬೆದರಿಕೆಯೊಡ್ಡಿರುವ ಘಟನೆ ಮಂಗಳವಾರ ನಗರದ ಆಕಾಶವಾಣಿ ಬಳಿಯಿರುವ ರಿಂಗ್ ರಸ್ತೆಯಲ್ಲಿ ಸಂಭವಿಸಿದೆ.

ಈ ಬಗ್ಗೆ ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ನಡುವೆ, ‘ನನಗೆ ಜೀವ ಬೆದರಿಕೆಯೊಡ್ಡಿರುವ ಪ್ರಕರಣದ ಹಿಂದೆ ಜಿಲ್ಲಾ ಉಸ್ತುವಾರಿ ಸಚಿವರ ಕುಮ್ಮಕ್ಕು ಇದೆ’ ಎಂದು ವಿಜುಗೌಡ ಪಾಟೀಲ ಆರೋಪಿಸಿದ್ದಾರೆ.

ಸಚಿವರ ನಕಾರ: ವಿಜುಗೌಡ ಪಾಟೀಲ್ ಅವರಿಗೆ ಜೀವ ಬೆದರಿಕೆ ಒಡ್ಡಿಸುವಂತಹ ಸಣ್ಣ ಕೆಲಸಕ್ಕೆ ನಾನು ಎಂದೂ ಇಳಿಯುವವನಲ್ಲ. ಇದೆಲ್ಲಾ ಸುಳ್ಳು. ಬರೀ ನಾಟಕ. ಒಂದ ವೇಳೆ ಜೀವ ಬೆದರಿಕೆ ಒಡ್ಡಿದ್ದರಲ್ಲಿ ಶೇ.1ರಷ್ಟು ನಿಜಾಂಶವಿದ್ದರೂ ಕೂಡಲೇ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಎಸ್ಪಿಗೆ ಸೂಚಿಸುತ್ತೇನೆ ಎಂದು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ.

loader