ಗೋರಖ್’ಪುರದ ಆಸ್ಪತ್ರೆಯಲ್ಲಿ ಆಕ್ಸಿಜನ್​ ಕೊರತೆಯಿಂದ ಸಾವನಪ್ಪಿರುವ ಮಕ್ಕಳ ಸಂಖ್ಯೆ 64ಕ್ಕೇರಿದೆ. ಯೋಗಿ ಆದಿತ್ಯನಾಥ್​ ಪ್ರತಿನಿಧಿಸುತ್ತಿದ್ದ ಕ್ಷೇತ್ರ ಗೋರಖ್​'ಪುರ್​ನಲ್ಲಿರುವ ಅತಿದೊಡ್ಡ ಆಸ್ಪತ್ರೆ ಬಾಬಾ ರಾಘವದಾಸ್​ ಮೆಡಿಕಲ್​​​ ಕಾಲೇಜು ಆಸ್ಪತ್ರೆಯಲ್ಲಿ ಈ ದುರ್ಘಟನೆ ಸಂಭವಿಸಿದ್ದು ಮೃತ ಮಕ್ಕಳ ಸಂಖ್ಯೆ 64ಕ್ಕೇರಿದೆ.

ನವದೆಹಲಿ: ಗೋರಖ್’ಪುರದ ಆಸ್ಪತ್ರೆಯಲ್ಲಿ ಆಕ್ಸಿಜನ್​ ಕೊರತೆಯಿಂದ ಸಾವನಪ್ಪಿರುವ ಮಕ್ಕಳ ಸಂಖ್ಯೆ 64ಕ್ಕೇರಿದೆ.

ಯೋಗಿ ಆದಿತ್ಯನಾಥ್​ ಪ್ರತಿನಿಧಿಸುತ್ತಿದ್ದ ಕ್ಷೇತ್ರ ಗೋರಖ್​'ಪುರ್​ನಲ್ಲಿರುವ ಅತಿದೊಡ್ಡ ಆಸ್ಪತ್ರೆ ಬಾಬಾ ರಾಘವದಾಸ್​ ಮೆಡಿಕಲ್​​​ ಕಾಲೇಜು ಆಸ್ಪತ್ರೆಯಲ್ಲಿ ಈ ದುರ್ಘಟನೆ ಸಂಭವಿಸಿದ್ದು ಮೃತ ಮಕ್ಕಳ ಸಂಖ್ಯೆ 64ಕ್ಕೇರಿದೆ.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಘಟನೆಯ ಸಮಗ್ರ ತನಿಖೆಗೆ ಆದೇಶಿಸಿದ್ದಾರೆ.

ಈ ನಡುವೆ ಪ್ರತಿಪಕ್ಷಗಳು ಯೋಗಿ ಆದಿತ್ಯನಾಥ್ ಘಟನೆಗೆ ನೈತಿಕ ಜವಾಬ್ದಾರಿ ಹೊತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿವೆ.

ಘಟನೆಗೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆಂದು ಕೇಂದ್ರ ಆರೋಗ್ಯ ಇಲಾಖೆಯ ರಾಜ್ಯ ಸಚಿವೆ ಅನುಪ್ರಿಯಾ ಪಟೇಲ್ ತಿಳಿಸಿದ್ದಾರೆ.