ನವದೆಹಲಿ(ಸೆ.24):ಪಾಕಿಸ್ತಾನವನ್ನು ಉಗ್ರ ರಾಷ್ಟ್ರ ಎಂದು ಘೋಷಿಸಲು ರಾಜ್ಯ ಸಭೆಯಲ್ಲಿ ಸಂಸದ ರಾಜೀವ್ ಚಂದ್ರಶೇಖರ್ ಖಾಸಗಿ ಸದಸ್ಯರ ವಿಧೇಯಕವನ್ನು ಸಲ್ಲಿಸಿದ್ದಾರೆ. ಈ ಬಗ್ಗೆ ರಾಜ್ಯ ಸಭಾ ಸಭಾಪತಿ ಹಮೀದ್ ಅನ್ಸಾರಿ ಅವರಿಗೆ ರಾಜೀವ್ ಚಂದ್ರಶೇಖರ್ ಪತ್ರ ಬರೆದಿದ್ದಾರೆ. ಭಯೋತ್ಪಾದನೆಯನ್ನು ಉತ್ಪಾದಿಸುವ ರಾಷ್ಟ್ರಗಳ ಘೋಷಣೆ ಮಸೂದೆ 2016' ಖಾಸಗಿ ಸದಸ್ಯರ ವಿಧೇಯಕವನ್ನು ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ರಾಜ್ಯಸಭೆಯಲ್ಲಿ ಮಂಡಿಸಲು ಇಚ್ಛಿಸುದಾಗಿ ಪತ್ರದಲ್ಲಿ ತಿಳಿಸಿದ್ದಾರೆ. ರಾಜ್ಯಸಭೆಯಲ್ಲಿ ಖಾಸಗಿ ಸದಸ್ಯರ ವಿಧೇಯಕ ಅಂಗೀಕಾರವಾದರೆ ಆ ವಿಧೇಯಕದ ಅನುಮೋದನೆಗಾಗಿ ಅದು ಲೋಕಸಭೆಯಲ್ಲಿ ಚರ್ಚೆಗೆ ಬರಲಿದೆ. ಬಳಿಕ ರಾಷ್ಟ್ರಪತಿಯವರ ಅಂಗೀಕಾರದ ಅವಶ್ಯಕತೆ ಇದೆ.
ಪಾಕ್'ಅನ್ನು ಭಯೋತ್ಪಾದಕ ರಾಷ್ಟ್ರ ಎಂದು ಘೋಷಿಸಿ: ಸಂಸದ ರಾಜೀವ್ ಚಂದ್ರಶೇಖರ್
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.
Latest Videos
