ಮಾನನಷ್ಟ ಮೊಕದ್ದಮೆ ಎದುರಿಸುತ್ತಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮಾರ್ಚ್ 21 ರಂದು ನ್ಯಾಯಾಲಯದಲ್ಲಿ ಹಾಜರಿರಬೇಕೆಂದು ದೆಹಲಿ ನ್ಯಾಯಾಲಯ ಸೂಚಿಸಿದೆ.

ನವದೆಹಲಿ (ಫೆ.18): ಮಾನನಷ್ಟ ಮೊಕದ್ದಮೆ ಎದುರಿಸುತ್ತಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮಾರ್ಚ್ 21 ರಂದು ನ್ಯಾಯಾಲಯದಲ್ಲಿ ಹಾಜರಿರಬೇಕೆಂದು ದೆಹಲಿ ನ್ಯಾಯಾಲಯ ಸೂಚಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಅನಾರೋಗ್ಯ ನಿಮಿತ್ತ ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿರುವದರಿಂದ ನ್ಯಾ. ಅಭಿಲಾಶ್ ಮಲೋತ್ರ ಕೇಜ್ರಿವಾಲ್ ಸಲ್ಲಿಸಿರುವ ವಿನಾಯಿತಿ ಅರ್ಜಿಗೆ ಅವಕಾಶ ನೀಡಿದ್ದಾರೆ. ಫೆ. 22 ರಂದು ಕೇಜ್ರಿ ದೆಹಲಿಗೆ ಹಿಂತಿರುಗಲಿದ್ದಾರೆ. ಉದ್ದೇಶಪೂರ್ವಕ ನಾನು ನ್ಯಾಯಾಲಯಕ್ಕೆ ಹಾಜರಾಗುವುದರಿಂದ ತಪ್ಪಿಸಿಕೊಂಡಿಲ್ಲ ಎಂದು ತಮ್ಮ ಅರ್ಜಿಯಲ್ಲಿ ಹೇಳಿಕೊಂಡಿದ್ದಾರೆ.