ಭೋಪಾಲ್(ಸೆ. 30): ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಜಲ ಸಂಪನ್ಮೂಲ ಸಚಿವೆ ಉಮಾ ಭಾರತಿ ಅವರ ವಿರುದ್ಧ ಭೋಪಾಲ್ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರಂಟ್ ಜಾರಿ ಮಾಡಿದೆ.

13 ವರ್ಷಗಳ ಹಿಂದೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಅವರು ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗದ ಉಮಾ ಭಾರತಿ ವಿರುದ್ಧ ಚೀಫ್ ಜ್ಯುಡಿಸಿಯಲ್ ಮ್ಯಾಜಿಸ್ಟ್ರೇಟ್ ಭುಭಾಸ್ಕರ್ ಯಾದವ್ ಅವರು ಬಂಧನ ವಾರಂಟ್ ಜಾರಿ ಮಾಡಿದ್ದಾರೆ.

ಮಹತ್ವದ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ವೈಯಕ್ತಿಕ ವಿಚಾರಣೆಯಿಂದ ವಿನಾಯ್ತಿ ಕೋರಿ ಉಮಾ ಭಾರತಿ ವಕೀಲರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಕೋರ್ಟ್, ಭಾರತಿಯನ್ನು ಬಂಧಿಸಿ ಕರೆತರುವಂತೆ ಪೊಲೀಸರಿಗೆ ಸೂಚಿಸಿದೆ.