ನವದೆಹಲಿ(ಮಾ.02): ಪಾಕ್ ವಶದಲ್ಲಿದ್ದ ಭಾರತೀಯ ವಾಯುಸೇನೆಯ ವಿಂಗ್ ಕಮಾಂಡರ್ ಅಭಿನಂದನ್ ಸುರಕ್ಷಿತವಾಗಿ ಭಾರತಕ್ಕೆ ಮರಳಿದ್ದಾರೆ. ಈ ಮಧ್ಯೆ ನವದೆಹಲಿಯಲ್ಲಿ ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ದಾಖಲಾಗಿರುವ ಅಭಿನಂದನ್ ಅವರನ್ನು ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ವಾಯುಸೇನಾ ಅಧಿಕಾರಿಗಳೊಂದಿಗೆ ಆಸ್ಪತ್ರೆ ಆಗಮಿಸಿದ ನಿರ್ಮಲಾ ಸೀತಾರಾಮನ್ ವಿಂಗ್ ಕಮಾಂಡರ್ ಅಭಿನಂದನ್ ಅವರ ಆರೋಗ್ಯ ವಿಚಾರಿಸಿದರು. ಆದರೆ ಇಬ್ಬರ ನಡುವೆ ಏನೆನು ಮಾತುಕತೆ ನಡೆಯಿತು ಎಂಬ ವಿವರ ಇನ್ನಷ್ಟೇ ಹೊರ ಬೀಳಬೇಕಿದೆ.

ಈ ಮಧ್ಯೆ ವಾಯುಸೇನಾ ಮುಖ್ಯಸ್ಥ ಬಿಎಸ್ ಧನೋಹಾ ಅವರನ್ನೂ ಭೇಟಿಯಾಗಿರುವ ವಿಂಗ್ ಕಮಾಂಡರ್ ಅಭಿನಂದನ್, ಪಾಕಿಸ್ತಾನದಲ್ಲಿ ಸೆರೆ ಸಿಕ್ಕ ಘಟನೆಯ ಕುರಿತು ಸಂಪೂರ್ಣ ವಿವರಣೆ ನೀಡಿದ್ದಾರೆ ಎನ್ನಲಾಗಿದೆ.