ಪಂಚಕುಲ(ಆ.18): ಸದ್ಯದ ಪರಿಸ್ಥಿತಿಯಲ್ಲಿ ಪಾಕಿಸ್ತಾನದೊಂದಿಗೆ ಯಾವುದೇ ದ್ವಿಪಕ್ಷೀಯ ಮಾತುಕತೆ ಸಾಧ್ಯವಿಲ್ಲ ಎಂದು ಹೇಳಿರುವ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಭವಿಷ್ಯದಲ್ಲಿ ಪಾಕಿಸ್ತಾನದೊಂದಿಗೆ ಮಾತುಕತೆ ನಡೆದರೆ ಸದು ಕೇವಲ ಪಾಕ್ ಆಕ್ರಮಿತ ಕಾಶ್ಮೀರ ಕುರಿತಾಗಿ ಮಾತ್ರ ಎಂದು ಸ್ಪಷ್ಟಪಡಿಸಿದ್ದಾರೆ.

ಹರಿಯಾಣದ ಪಂಚಕುಲದಲ್ಲಿ ಚುನಾವಣಾ ಪ್ರಚಾರ ಉದ್ದೇಶಿಸಿ ಮಾತನಾಡಿದ ರಾಜನಾಥ್ ಸಿಂಗ್, ಜಮ್ಮು ಮತ್ತು ಕಾಶ್ಮೀರದ ಕುರಿತು ಪಾಕಿಸ್ತಾನದೊಂದಿಗೆ ಯಾವುದೇ ರೀತಿಯ ಮಾತುಕತೆ ನಡೆಸಲು ಭಾರತ ಸಿದ್ಧವಿಲ್ಲ ಎಂದು ಸ್ಪಷ್ಟಪಡಿಸಿದರು.

ಪಾಕ್’ನೊಂದಿಗೆ ಕೇವಲ POK ಕುರಿತು ಮಾತನಾಡುವುದಾಗಿ ಹೇಳಿರುವ ರಕ್ಷಣಾ ಸಚಿವರು, ಪಾಕಿಸ್ತಾನ ಭಯೋತ್ಪಾದನೆಗೆ ಕುಮ್ಮಕ್ಕು ನೀಡುವುದನ್ನು ನಿಲ್ಲಿಸಬೇಕು ಎಂದು ಈ ವೇಳೆ ಒತ್ತಾಯಿಸಿದರು.