ಪಾಕ್‌ಗೆ ಖಡಕ್ ಎಚ್ಚರಿಕೆ ನೀಡಿದ ರಕ್ಷಣಾ ಸಚಿವೆ ನಿರ್ಮಲಾ ಸೀತರಾಮನ್

ಕದನ ವಿರಾಮ ಉಲ್ಲಂಘನೆ ಮಾಡಿ ದಾಳಿ ನಡೆಸುತ್ತಿರುವ ಪಾಕಿಸ್ತಾನಕ್ಕೆ ರಕ್ಷಣಾ ಸಚಿವೆ ನಿರ್ಮಲಾ ಸೀತರಾಮನ್ ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಗೃಹಸಚಿವರು ಘೋಷಿಸಿರುವ ಕದನ ವಿರಾಮವನ್ನು ನಾವು ಗೌರವಿಸುತ್ತೇವೆ. ಆದರೆ ಪಾಕಿಸ್ತಾನವು ತನ್ನ ಚಾಳಿಯನ್ನು ಬಿಡದಿದ್ದರೆ, ಅದಕ್ಕೆ ತಕ್ಕ ಉತ್ತರ ನೀಡುತ್ತೇವೆಂದು ನಿರ್ಮಲಾ ಸೀತರಾಮನ್ ಎಚ್ಚರಿಸಿದ್ದಾರೆ.  

Comments 0
Add Comment