Asianet Suvarna News Asianet Suvarna News

ಶಿಕ್ಷಕರಾಗಲು ಇಂಗ್ಲಿಷ್ ಪದವಿ ಕಡ್ಡಾಯ: ಕನ್ನಡ ಪದವೀಧರರ ನೌಕರಿಗೆ ಕೆಪಿಎಸ್ಸಿ ಅಡ್ಡಿ

ಸಮಾಜ ಕಲ್ಯಾಣ ಇಲಾಖೆ ಅಧೀನದ ವಸತಿ ಶಾಲೆಗಳ ಕೆಲ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಂಗ್ಲ ಭಾಷೆ ಯಲ್ಲಿ ಪದವಿ ಕಡ್ಡಾಯ ಮಾಡಿರುವುದರಿಂದ ನೇಮಕಾತಿ ಪ್ರಕ್ರಿಯೆ ಸ್ಥಗಿತಗೊಳಿಸಲು ಸಮಾಜ ಕಲ್ಯಾಣ ಇಲಾಖೆ ಮಾಡಿರುವ ಮನವಿಗೆ ಕರ್ನಾಟಕ ಲೋಕ ಸೇವಾ ಆಯೋಗ (ಕೆಪಿಎಸ್‌ಸಿ) ಕಿಮ್ಮತ್ತು ನೀಡಿಲ್ಲ.

Degree in english to become a teacher

ಬೆಂಗಳೂರು(ಜು.31): ಸಮಾಜ ಕಲ್ಯಾಣ ಇಲಾಖೆ ಅಧೀನದ ವಸತಿ ಶಾಲೆಗಳ ಕೆಲ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಂಗ್ಲ ಭಾಷೆ ಯಲ್ಲಿ ಪದವಿ ಕಡ್ಡಾಯ ಮಾಡಿರುವುದರಿಂದ ನೇಮಕಾತಿ ಪ್ರಕ್ರಿಯೆ ಸ್ಥಗಿತಗೊಳಿಸಲು ಸಮಾಜ ಕಲ್ಯಾಣ ಇಲಾಖೆ ಮಾಡಿರುವ ಮನವಿಗೆ ಕರ್ನಾಟಕ ಲೋಕ ಸೇವಾ ಆಯೋಗ (ಕೆಪಿಎಸ್‌ಸಿ) ಕಿಮ್ಮತ್ತು ನೀಡಿಲ್ಲ.

ರಾಜ್ಯದಲ್ಲಿನ ಶಿಕ್ಷಣ ಸಂಸ್ಥೆಗಳಲ್ಲಿ ಬೋ‘ನೆ ಮಾಡಲು ಆಂಗ್ಲ ಭಾಷೆ ಕಡ್ಡಾಯ ಮಾಡಿರುವುದರಿಂದ ಕನ್ನಡದಲ್ಲಿ ಪದವಿ ಪೂರ್ಣಗೊಳಿಸಿರುವ ಸಾವಿರಾರು ಅಭ್ಯರ್ಥಿಗಳಿಗೆ ಅನ್ಯಾಯವಾಗಲಿದೆ. ಹಾಗಾಗಿ ಕನ್ನಡದಲ್ಲಿ ಪದವಿ ಪಡೆದವರಿಗೂ ಅವಕಾಶ ಕಲ್ಪಿಸ ಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರು ಸಮಾಜ ಕಲ್ಯಾಣ ಇಲಾಖೆ ಹಾಗೂ ಕೆಪಿಎಸ್‌ಸಿಗೆ ಪತ್ರ ಬರೆದು ಒತ್ತಾಯಿಸಿದ್ದರು.

ಅಷ್ಟೇ ಅಲ್ಲದೆ, ಸಮಾಜ ಕಲ್ಯಾಣ ಇಲಾಖೆ ಉಪ ಕಾರ್ಯದರ್ಶಿ ಶಂಭುಗಯ್ಯ ಅವರು ಕೆಪಿಎಸ್‌ಸಿ ಅ‘್ಯಕ್ಷರು ಹಾಗೂ ಕಾರ್ಯದರ್ಶಿಯವರಿಗೆ ಪತ್ರ ಬರೆದು ಆಂಗ್ಲ ಮಾಧ್ಯಮ ಕಡ್ಡಾಯಗೊಳಿಸಿರುವ ಸಂಬಂ‘ ಸಚಿವರಿಂದ ಪ್ರತಿಕ್ರಿಯೆ ಬರುವವರೆಗೂ ನೇಮಕಾತಿ ಪ್ರಕ್ರಿಯೆ ಸ್ಥಗಿತಗೊಳಿಸುವಂತೆ ಸೂಚಿಸಿ ದ್ದಾರೆ. ಆದರೆ, ಕೆಪಿಎಸ್‌ಸಿ ಮಾತ್ರ ಇತ್ತ ಗಮನ ಹರಿ ಸದೆ ನೇಮಕಾತಿ ಪ್ರಕ್ರಿಯೆ ಮುಂದುವರೆಸುತ್ತಿದೆ. ಕನ್ನಡ ಭಾಷೆಯಲ್ಲಿ ಪದವಿ ಅಧ್ಯಯನ ಮಾಡಿ ರುವ ಲಕ್ಷಾಂತರ ಅಭ್ಯರ್ಥಿಗಳು ರಾಜ್ಯದಲ್ಲಿದ್ದೇವೆ. ಕೆಪಿಎಸ್‌ಸಿ ಹಾಗೂ ಸಮಾಜ ಕಲ್ಯಾಣ ಇಲಾಖೆಯ ನಿಯಮಗಳಿಂದ ನಮ್ಮೆಲ್ಲರಿಗೂ ಅರ್ಜಿ ಸಲ್ಲಿಸಲು ಅವಕಾಶ ಇಲ್ಲದಂತಾಗಿದೆ. ಈ ಬಗ್ಗೆ ಸರ್ಕಾರ ಮಧ್ಯ ಪ್ರವೇಶಿಸಿ ನಮಗೆ ನ್ಯಾಯ ಒದಗಿಸಬೇಕು ಎಂದು ಅರ್ಜಿ ಸಲ್ಲಿಸಲು ಅವಕಾಶ ವಂಚಿತರಾದ ಅಭ್ಯರ್ಥಿ ಗಳು ತಮ್ಮ ಅಳಲನ್ನು ತೋಡಿಕೊಳ್ಳುತ್ತಾರೆ.

ಸ್ಥಗಿತ ಸ್ಥಾನವಿಲ್ಲ:

ಸರ್ಕಾರಿ ಹುದ್ದೆಗಳ ನೇಮಕಕ್ಕೆ ಇಲಾಖೆಗಳಿಂದ ಪ್ರಸ್ತಾವನೆ ಬಂದು ಅಧಿಸೂಚನೆ ಹೊರಡಿಸಿದ ಬಳಿಕ ಯಾವುದೇ ಕಾರಣಕ್ಕೂ ಸ್ಥಗಿತ ಗೊಳಿಸಲು ಅವಕಾಶವಿಲ್ಲ. ವೃಂದ ಮತ್ತು ನೇಮಕಾತಿ ನಿಯಮಗಳ ಪ್ರಕಾರವೇ ಅಧಿಸೂಚನೆ ಹೊರಡಿಸಲಾ ಗಿದ್ದು, ಪತ್ರದ ಮೂಲಕ ಸೂಚಿಸಿದರೆ ಪ್ರಯೋಜನ ವಿಲ್ಲ. ವೃಂದ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿ ಮಾಡುವ ಮೂಲಕ ಹೊಸದಾಗಿ ಪ್ರಸ್ತಾವನೆ ಬಂದಲ್ಲಿ ಮಾತ್ರ ಬದಲಾವಣೆ ಮಾಡಲು ಸಾಧ್ಯ. ಆದರೆ, ನೇಮಕಾತಿ ಪ್ರಕ್ರಿಯೆ ಈಗಾಗಲೇ ಪ್ರಾರಂ‘ವಾಗಿದ್ದು ಯಾವುದೇ ಕಾರಣಕ್ಕೂ ಸ್ಥಗಿತ ಗೊಳಿಸುವುದಿಲ್ಲ ಎಂದು ಕೆಪಿಎಸ್‌ಸಿಯ ಹಿರಿಯ ಅಧಿಕಾರಿಗಳು ತಿಳಿಸುತ್ತಾರೆ.

 

Latest Videos
Follow Us:
Download App:
  • android
  • ios