ನೀರಜ್ ಸಕ್ಸೇನಾ ಹಾಗೂ ಅನುಜ್ ಅಗರ್‌'ವಾಲ್ ಎಂಬುವರು ನೀಡಿದ್ದ ದೂರಿನನ್ವಯ ಫೆಬ್ರವರಿಯಲ್ಲಿ ಕೇಜ್ರಿವಾಲ್ ವಿರುದ್ಧ ದೂರು ದಾಖಲಿಸಲಾಗಿತ್ತು.

ನವದೆಹಲಿ(ಡಿ.24): ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು 2013ರ ವಿಧಾನಸಭಾ ಚುನಾವಣೆ ವೇಳೆ ಅಫಿಡವಿಟ್‌'ನಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಕೋರ್ಟ್ ಜಾಮೀನು ನೀಡಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕೇಜ್ರಿವಾಲ್ ಅವರು 10 ಸಾವಿರ ರೂಪಾಯಿ ಮೌಲ್ಯದ ವೈಯಕ್ತಿಕ ಬಾಂಡ್ ನೀಡಬೇಕೆಂದು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಆಶಿಶ್ ಗುಪ್ತಾ ಅವರು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದಾರೆ ಹಾಗೂ ಪ್ರಕರಣದ ವಿಚಾರಣೆಯನ್ನು 2017ರ ಏ.7ಕ್ಕೆ ಮುಂದೂಡಲಾಗಿದೆ. ಕೋರ್ಟ್ 2016ರ ಆ. 31ರಂದು ಕೇಜ್ರಿವಾಲ್ ಹಾಜರಿಗೆ ವಿನಾಯ್ತಿ ನೀಡಿತ್ತು.

ನೀರಜ್ ಸಕ್ಸೇನಾ ಹಾಗೂ ಅನುಜ್ ಅಗರ್‌'ವಾಲ್ ಎಂಬುವರು ನೀಡಿದ್ದ ದೂರಿನನ್ವಯ ಫೆಬ್ರವರಿಯಲ್ಲಿ ಕೇಜ್ರಿವಾಲ್ ವಿರುದ್ಧ ದೂರು ದಾಖಲಿಸಲಾಗಿತ್ತು.