ನವದೆಹಲಿ (ಮಾ.21): ಡಿಡಿಸಿಎ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯ ಅರವಿಂದ್ ಕೇಜ್ರಿವಾಲ್ ಗೆ ಜಾಮೀನು ನೀಡಿದೆ.

ಈ ಹಿಂದೆ ವಿಚಾರಣೆಗೆ ಹಾಜರಾಗದೇ ಇರುವುದಕ್ಕೆ ನ್ಯಾಯಾಲಯದ ಕೆಂಗಣ್ಣಿಗೆ ಗುರಿಯಾಗಿದ್ದ ಕೇಜ್ರಿವಾಲ್ ಇಂದು ನ್ಯಾಯಾಲಯಕ್ಕೆ ಹಾಜರಾದರು. 10 ಸಾವಿರ ರೂ ನೀಡಬೇಕೆಂದು ಮುಚ್ಚಳಿಕೆ ಬರೆಸಿಕೊಂಡು ಕೇಜ್ರಿಗೆ ಜಾಮೀನು ನೀಡಲಾಗಿದೆ.

ಮುಂದಿನ ವಿಚಾರಣೆಯನ್ನು ಏಪ್ರಿಲ್ 1 ರಂದು ನಡೆಸಲಾಗುವುದು ಎಂದು ನ್ಯಾಯಾಲಯ ಹೇಳಿದೆ.