ನವದೆಹಲಿ(ಮಾ.27): ಉದ್ದೇಶಿತ ಸುಸ್ತಿದಾರ ವಿಜಯ್ ಮಲ್ಯ ಅವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ದೆಹಲಿ ಹೈಕೋರ್ಟ್ ಆದೇಶಿಸಿದೆ.

ಪಿಎಂಎಲ್'ಎ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ದೀಪಕ್ ಶೇರಾವತ್  ಬೆಂಗಳೂರಿನ ಪೊಲೀಸ್ ಆಯುಕ್ತರಿಗೆ ಆದೇಶಿಸಿ ಮೇ.8ರೊಳಗೆ ವಿವರಣೆ ನೀಡುವಂತೆ ಸೂಚಿಸಿದರು. ಮಲ್ಯ ಆಸ್ತಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅರ್ಜಿಯ ವಿಚಾರಣೆ ನಡೆಸಿ ತೀರ್ಪು ನೀಡಿದೆ.

ದೆಹಲಿ ಹೈಕೋರ್ಟ್ ಜನವರಿ 4 ರಂದು ಮಲ್ಯಾ ಅವರನ್ನು ಘೋಷಿತ ಅಪರಾಧಿ ಎಂದು ತೀರ್ಪು ನೀಡಿತ್ತು. ಕಳೆದ ವರ್ಷದ ಏಪ್ರಿಲ್ 12ರಂದು ಮಲ್ಯ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಲಾಗಿತ್ತು. ಭಾರತೀಯ ಬ್ಯಾಂಕ್'ಗಳಿಗೆ ಸಾವಿರಾರು ಕೋಟಿ ರೂ. ವಂಚಿಸಿ ಲಂಡನ್'ನಲ್ಲಿ ತಲೆತಪ್ಪಿಸಿಕೊಂಡಿದ್ದಾನೆ.