ನವದೆಹಲಿ(ಜೂ.25): ಮಹತ್ವದ ಬೆಳವಣಿಗೆಯೊಂದರಲ್ಲಿ ಮತದಾನ ಪ್ರಕ್ರಿಯೆಗೆ ಅಡ್ಡಿಪಡಿಸಿದ ಆರೋಪದ ಮೇಲೆ, ಆಪ್ ಶಾಸಕನೋರ್ವನಿಗೆ ದೆಹಲಿ ಕೋರ್ಟ್ ಮೂರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ.

ಮತದಾನ ಪ್ರಕ್ರಿಯೆಗೆ ಅಡ್ಡಿಪಡಿಸಿದ ಆರೋಪದ ಮೇಲೆ ಆಪ್ ಶಾಸಕ ಮನೋಜ್ ಕುಮಾರ್ ಅವರಿಗೆ ದೆಹಲಿ ಕೋರ್ಟ್ ತಿಂಗಳು ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

2013ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಪೂರ್ವ ದೆಹಲಿಯ ಕಲ್ಯಾಣ್ ಪುರಿ ಮತದಾನ ಕೇಂದ್ರದಲ್ಲಿ, ಮತದಾನ ಪ್ರಕ್ರಿಯೆ ಹಾಗೂ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ ಮನೋಜ್ ವಿರುದ್ಧ ಚುನಾವಣಾ ಆಯೋಗ ಕೇಸ್ ದಾಖಲಿಸಿತ್ತು.

ಪ್ರಕರಣದ ವಿಚಾರಣೆ ನಡೆಸಿದ ದೆಹಲಿ ಕೋರ್ಟ್ ನ ಹೆಚ್ಚುವರಿ ಮುಖ್ಯ ಮೆಟ್ರೋಪೊಲಿಟಿಯನ್ ಮ್ಯಾಜಿಸ್ಟ್ರೇಟ್ ಸಮರ್ ವಿಶಾಲ್, ಆರೋಪಿ ಶಾಸಕನಿಗೆ ಮೂರು ತಿಂಗಳು ಜೈಲು ಶಿಕ್ಷೆ ವಿಧಿಸಿದ್ದಾರೆ. 

ಇದೇ ವೇಳೆ 10 ಸಾವಿರ ರೂ. ಬಾಂಡ್ ಮೇಲೆ ಮನೋಜ್ ಕುಮಾರ್'ಗೆ ಕೋರ್ಟ್ ಜಾಮೀನು ಕೂಡ ಮಂಜೂರು ಮಾಡಿದೆ.