Asianet Suvarna News Asianet Suvarna News

2ಜಿ ಕೇಸ್‌: ಎ.ರಾಜಾ, ಕನಿಮೋಳಿಗೆ ದೆಹಲಿ ಹೈಕೋರ್ಟ್‌ ನೋಟಿಸ್‌

2 ಜಿ ಹಗರಣದಲ್ಲಿ ಸಂಬಂಧ ಇತ್ತೀಚೆಗೆ ವಿಶೇಷ ನ್ಯಾಯಾಲಯ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿರುವ ಮೇಲ್ಮನವಿ ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸಿರುವ ದೆಹಲಿ ಹೈಕೋರ್ಟ್‌, ಈ ಕುರಿತು ಪ್ರತಿಕ್ರಿಯಿಸುವಂತೆ ಪ್ರಕರಣದ ಆರೋಪಿಗಳಾದ ಮಾಜಿ ಸಚಿವ ಎ.ರಾಜಾ. ಡಿಎಂಕೆ ಸಂಸದೆ ಕನಿಮೋಳಿ ಸೇರಿದಂತೆ ಇತರೆ ಹಲವರಿಗೆ ನೋಟಿಸ್‌ ಜಾರಿ ಮಾಡಿದೆ.

Delhi High Court notice to Raja  Kanimozhi on ED  CBI appeal in 2G case

ನವದೆಹಲಿ (ಮಾ.22): 2 ಜಿ ಹಗರಣದಲ್ಲಿ ಸಂಬಂಧ ಇತ್ತೀಚೆಗೆ ವಿಶೇಷ ನ್ಯಾಯಾಲಯ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿರುವ ಮೇಲ್ಮನವಿ ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸಿರುವ ದೆಹಲಿ ಹೈಕೋರ್ಟ್‌, ಈ ಕುರಿತು ಪ್ರತಿಕ್ರಿಯಿಸುವಂತೆ ಪ್ರಕರಣದ ಆರೋಪಿಗಳಾದ ಮಾಜಿ ಸಚಿವ ಎ.ರಾಜಾ. ಡಿಎಂಕೆ ಸಂಸದೆ ಕನಿಮೋಳಿ ಸೇರಿದಂತೆ ಇತರೆ ಹಲವರಿಗೆ ನೋಟಿಸ್‌ ಜಾರಿ ಮಾಡಿದೆ.

ಪ್ರಕರಣದ ಮುಂದಿನ ವಿಚಾರಣೆಯನ್ನು ಮೇ 25ಕ್ಕೆ ಮುಂದೂಡಿದೆ. ಅಲ್ಲದೆ, 2ಜಿ ಹಗರಣದ ಅಕ್ರಮ ಹಣ ವ್ಯವಹಾರ ಆರೋಪದಡಿ 223 ಕೋಟಿ ರು. ಆಸ್ತಿ ಮುಟ್ಟುಗೋಲು ಹಾಕಿಕೊಂಡಿರುವ ಜಾರಿ ನಿರ್ದೇಶನಾಲಯಕ್ಕೆ ಯಥಾಸ್ಥಿತಿ ಕಾಪಾಡಿಕೊಳ್ಳುವಂತೆ ದೆಹಲಿ ಹೈಕೋರ್ಟ್‌ ಹೇಳಿದೆ. 2ಜಿ ಹಗರಣ ಸಂಬಂಧ ಕಳೆದ ವರ್ಷದ ಡಿಸೆಂಬರ್‌ 21ರಂದು ವಿಚಾರಣೆ ನಡೆಸಿದ್ದ ವಿಶೇಷ ನ್ಯಾಯಾಲಯ, ಈ ಪ್ರಕರಣದಲ್ಲಿ ಮಾಜಿ ಸಚಿವ ಎ.ರಾಜಾ, ಡಿಎಂಕೆ ಸಂಸದೆ ಕನಿಮೋಳಿ ಮತ್ತು ಇತರರನ್ನು ಆರೋಪ ಮುಕ್ತಗೊಳಿಸಿತ್ತು. ಆದರೆ, ಜಾರಿ ನಿರ್ದೇಶನಾಲಯ ಮತ್ತು ಸಿಬಿಐ ವಿಶೇಷ ನ್ಯಾಯಾಲಯದ ತೀರ್ಪು ಪ್ರಶ್ನಿಸಿ, ದೆಹಲಿ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದ್ದವು. 

Follow Us:
Download App:
  • android
  • ios