ಬೆಂಗಳೂರು(ಅ.14): ಆನ್‌ಲೈನ್‌ನಲ್ಲಿ ಶಾಪಿಂಗ್ ಮಾಡಿದ್ದ ವಸ್ತುವನ್ನು ಡೆಲಿವರಿ ಕೊಡಲು ಹೋಗಿದ್ದ ಯುವಕನೊಬ್ಬ ವಿದೇಶಿ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿ ಇದೀಗ ಜೈಲು ಸೇರಿದ್ದಾನೆ.

ಅಬು ಸಲ್ಮಾನ್ ಬಂಧಿತ ಆರೋಪಿ. ಅಪಾರ್ಟ್‌ಮೆಂಟ್‌ವೊಂದರಲ್ಲಿ ವಾಸವಿದ್ದ ಇರಾನ್ ಮೂಲದ 23 ವರ್ಷದ ಮಹಿಳೆಯೊಬ್ಬರು ಆನ್‌ಲೈಲ್‌ನಲ್ಲಿ ಶೂ ಖರೀದಿಸಿದ್ದರು. ಇದನ್ನು ಡೆಲಿವರಿ ಮಾಡಲು ಮನೆಗೆ ಬಂದಿದ್ದ ಅಬು ಸಲ್ಮಾನ್, ಮಹಿಳೆಯನ್ನು ಕಂಡು ಪ್ಯಾಂಟ್‌ನ ಜಿಪ್ ತೆಗೆದು ಅಸಭ್ಯವಾಗಿ ವರ್ತಿಸಿದ್ದಾನೆ. ಇದರಿಂದ ಗಾಬರಿಗೊಂಡ ಮಹಿಳೆ ಜೋರಾಗಿ ಕೂಗಿಕೊಂಡಿದ್ದಾರೆ. ಕೂಡಲೇ ಸ್ಥಳದಿಂದ ಅಬುಸಲ್ಮಾನ್ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಸ್ಥಳೀಯರು ಆರೋಪಿಯನ್ನು ಹಿಡಿದು ಥಳಿಸಿ, ಬಳಿಕ ಪೊಲೀಸರಿಗೊಪ್ಪಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದು, ಪೊಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಿಸುವ ಕುರಿತು ಪರಿಶೀಲಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಪ್ರಕರಣ ಕುಮಾರಸ್ವಾಮಿ ಲೇಔಟ್ ಠಾಣೆಯಲ್ಲಿ ದಾಖಲಾಗಿದೆ.