ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬೆಂಗಳೂರು (ಸೆ.26): ಬೆಂಗಳೂರಿನಲ್ಲಿ ಡೆಂಗ್ಯೂಗೆ ಮತ್ತೋರ್ವ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ. ಬನ್ನೇರುಘಟ್ಟ ರಸ್ತೆಯ ವಿವರ್ಸ್ ಕಾಲೋನಿಯ 8 ವರ್ಷದ ಶ್ರಾವಣಿ ಮೃತ ಪಟ್ಟದ್ದಾಳೆ.

ಕಳೆದ ಹಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಶ್ರಾವಣಿಗೆ ಬಿಳಿ ರಕ್ತಕಣಗಳು ತೀವ್ರವಾಗಿ ಕುಸಿದಿದೆ. ಹಲವು ಆಸ್ಪತ್ರೆಗಳಿಗೆ ಚಿಕಿತ್ಸೆಗೆ ಪ್ರಯತ್ನಿಸಿದರೂ ಕೊನೆಗೆ ಇಂದಿರಾಗಾಂಧಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾಳೆ.

ಇತ್ತೀಚೆಗೆ ಬೆಂಗಳೂರು ಸುತ್ತಮುತ್ತ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿವೆ, ಇದು ಸಾರ್ವಜನಿಕರಲ್ಲೂ ಆತಂಕ ಹೆಚ್ಚಿಸಿದೆ.