ಸಿಎಂ ಸಿದ್ದರಾಮಯ್ಯ ಡಿನೋಟಿಫೈ ಮಾಡಿದ್ದಾರೆಂದು ಆರೋಪಿಸಿ  ಬಿಜೆಪಿ ನಾಯಕರು  ಎಸಿಬಿಯಲ್ಲಿ ದೂರು ದಾಖಲಿಸಿದ್ದಾರೆ.

ಬೆಂಗಳೂರು (ಅ.16): ಸಿಎಂ ಸಿದ್ದರಾಮಯ್ಯ ಡಿನೋಟಿಫೈ ಮಾಡಿದ್ದಾರೆಂದು ಆರೋಪಿಸಿ ಬಿಜೆಪಿ ನಾಯಕರು ಎಸಿಬಿಯಲ್ಲಿ ದೂರು ದಾಖಲಿಸಿದ್ದಾರೆ.

ಒಬಿಸಿ ಮೋರ್ಚಾದ ಅಧ್ಯಕ್ಷ ಬಿ.ಜೆ.ಪುಟ್ಟಸ್ವಾಮಿ ನೇತೃತ್ವದಲ್ಲಿ ಸಿಎಂ ವಿರುದ್ಧ ದೂರು ದಾಖಲಿಸಲಾಗಿದೆ.

ಸಿಎಂ ಭೂಪಸಂದ್ರದಲ್ಲಿ 6.36 ಎಕರೆ ಜಮೀನನನ್ನು ಡಿನೋಟಿಫೈ ಮಾಡಿದ್ದ ಆರೋಪ ಕೇಳಿ ಬಂದಿದೆ. ಸಿಎಂ ಸಿದ್ದರಾಮಯ್ಯ ವಿರುದ್ದ ಬಿಜೆಪಿ ನಾಯಕರ ದೂರು ನೀಡಿದ್ದಾರೆ. ಶಾಸಕ ವೈ ಎ ನಾರಾಯಣಸ್ವಾಮಿ, ಶಾಸಕ ಮುನಿರಾಜು, ಮಾಜಿ ವಿಧಾನಪರಿಷತ್ ಸದಸ್ಯ ಅಶ್ವಥ್ ‌ನಾರಯಣ್ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ.

ಸಿಎಂ ಡಿನೋಟಿಫೈ ಮಾಡಿದ್ದಾರೆಂದು ಆರೋಪಿಸಿದ್ದ ಬಿ.ಜೆ.ಪುಟ್ಟಸ್ವಾಮಿ ಇಂದು ಸುದ್ದಿಗೋಷ್ಠಿ ನಡೆಸಿದ್ದಾರೆ.