ರೈತರ ಸಾಲಮನ್ನಾ ವಿಚಾರ ಆಯಾ ರಾಜ್ಯ ಸರ್ಕಾರಗಳಿಗೆ ಬಿಟ್ಟಿದ್ದೇ ಹೊರತು, ಕೇಂದ್ರದಿಂದ ಸಾಲಮನ್ನಾ ಮಾಡುವ ಯಾವುದೇ ಯೋಚನೆ ಇಲ್ಲ ಎಂದು ವಬಿಜೆಪಿ ರಾಜ್ಯಾಧ್ಯಕ್ಷ ಬಿ. ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಬಳ್ಳಾರಿ(ಜೂ.28): ರೈತರ ಸಾಲಮನ್ನಾ ವಿಚಾರ ಆಯಾ ರಾಜ್ಯ ಸರ್ಕಾರಗಳಿಗೆ ಬಿಟ್ಟಿದ್ದೇ ಹೊರತು, ಕೇಂದ್ರದಿಂದ ಸಾಲಮನ್ನಾ ಮಾಡುವ ಯಾವುದೇ ಯೋಚನೆ ಇಲ್ಲ ಎಂದು ವಬಿಜೆಪಿ ರಾಜ್ಯಾಧ್ಯಕ್ಷ ಬಿ. ಎಸ್. ಯಡಿಯೂರಪ್ಪ ಹೇಳಿದ್ದಾರೆ.

ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಉತ್ತರ ಪ್ರದೇಶ, ಮಹಾರಾಷ್ಟ್ರದಲ್ಲಿ ರೈತರ ಸಹಕಾರಿ ಸಂಘಗಳಲ್ಲಿನ ಸಾಲಮನ್ನಾ ಮಾಡಲಾಗಿದೆ. ಆದರೆ, ಕೇಂದ್ರ ಸರ್ಕಾರ ಯಾವುದೇ ನೆರವು ನೀಡಿಲ್ಲ. ಕೇಂದ್ರ ಸರ್ಕಾರ ಬೇರೆ ವಿಧಗಳಲ್ಲಿ ರೈತರಿಗೆ ನೆರವು ನೀಡುತ್ತಿದ್ದು ಸಾಲಮನ್ನಾ ಮಾಡಲು ಸಾಧ್ಯವಿಲ್ಲ ಎಂದು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಸಾಲಮನ್ನಾ ಮೂಡ್'ನಲ್ಲಿ ಕೇಂದ್ರ ಸರ್ಕಾರವಿಲ್ಲ. ಈ ಬಗ್ಗೆ ಕೆಂದ್ರದ ಮೇಲೆ ಪತ್ತಡ ತರುವ ಪ್ರಶ್ನೆಯೇ ಇಲ್ಲ ಎಂದರು.

ಬಿಜೆಪಿ ವಿಸ್ತಾರಕ ಯೋಜನೆ ಸಭೆ ಇಂದು

ತನ್ನ ಸಂಘಟನೆ ಬಲ ಪಡಿಸಲು ಬಿಜೆಪಿ ಹಮ್ಮಿಕೊಂಡಿರುವ ವಿಸ್ತಾರಕ ಯೋಜನೆಗೆ ಸಂಬಂಧಿಸಿ ದಂತೆ ಬುಧವಾರ ರಾಜ್ಯಾಧ್ಯಕ್ಷ ಬಿ. ಎಸ್‌.ಯಡಿಯೂರಪ್ಪ ನೇತೃತ್ವದಲ್ಲಿ ಸಭೆ ನಡೆಯಲಿದೆ. ಮಧ್ಯಾಹ್ನ ಈ ಸಭೆ ನಡೆಯಲಿದ್ದು, ಪಕ್ಷದ ರಾಷ್ಟ್ರೀಯ ಸಹ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್‌ಕುಮಾರ್‌, ಪ್ರಧಾನ ಕಾರ್ಯದರ್ಶಿ ರವಿಕುಮಾರ್‌ ಸೇರಿದಂತೆ ಹಲವು ಮುಖಂಡರು ಪಾಲ್ಗೊಳ್ಳಲಿದ್ದಾರೆ.