'ರಾಜ್ಯದಿಂದ ಮೋದಿ ಸ್ಪರ್ಧೆ ಮಾಡಿದರೂ ಸೋಲಿಸ್ತೀವಿ' ಎಂದು ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್‌ ತಿಳಿಸಿದ್ದಾರೆ. 

ತುಮಕೂರು, ಅ. 11: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಿಂದ ಪ್ರಧಾನಿ ನರೇಂದ್ರ ಮೋದಿ ಅವರು ಸ್ಪರ್ಧಿಸಿದರೆ, ಅವರನ್ನು ಎದುರಿಸುತ್ತೇವೆ. ಅಷ್ಟೇ ಅಲ್ಲ ಅವರನ್ನು ಸೋಲಿಸುತ್ತೇವೆ ಎಂದು ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್‌ ತಿಳಿಸಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯದಿಂದ ಮೋದಿ ಸ್ಪರ್ಧಿಸಿದರೆ ಅವರ ವಿರುದ್ಧ ಗೆಲುವು ಸಾಧಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಳ್ಳಾರಿ ಲೋಕಸಭಾ ಕ್ಷೇತ್ರಕ್ಕೆ ಇನ್ನು ಅಭ್ಯರ್ಥಿ ಹೆಸರು ಅಂತಿಮವಾಗಿಲ್ಲ. ಈ ಸಂಬಂಧ ಸಚಿವ ಡಿ.ಕೆ. ಶಿವಕುಮಾರ್‌ ಅವರು ಸ್ಥಳೀಯ ಮುಖಂಡರ ಜತೆ ಸಭೆ ನಡೆಸಿದ್ದು, ವರಿಷ್ಠರ ಗಮನಕ್ಕೆ ತಂದು ಅಭ್ಯರ್ಥಿಯನ್ನು ಅಂತಿಮಗೊಳಿಸಲಾಗುವುದು ಎಂದರು.