ಕಳೆದ  ಹದಿನೈದು ದಿನಗಳಿಂದ ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ ಬೆಳವಣಿಗಗಳು ದಿನದಿಂದ ದಿನಕ್ಕೆ ತೀವ್ರ ಕುತೂಹಲ ಕೆರಳಿಸುತ್ತಿದೆ. ಇದೀಗ ಈ ರಾಜ್ಯ ರಾಜಕಾರಣದ ಬಿಕ್ಕಟ್ಟು ದೆಹಲಿಗೆ ಶಿಫ್ಟ್ ಆಗಿದೆ.

ಬೆಂಗಳೂರು, (ಸೆ.19):   ಕಳೆದ  ಹದಿನೈದು ದಿನಗಳಿಂದ ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ ಬೆಳವಣಿಗಗಳು ದಿನದಿಂದ ದಿನಕ್ಕೆ ತೀವ್ರ ಕುತೂಹಲ ಕೆರಳಿಸುತ್ತಿದೆ.<br/> <br/>ಇದೀಗ ಈ ರಾಜ್ಯ ರಾಜಕಾರಣದ ಬಿಕ್ಕಟ್ಟು ದೆಹಲಿಗೆ ಶಿಫ್ಟ್ ಆಗಿದೆ.  ಇಂದು (ಬುಧವಾರ) ಸಂಜೆ 5ಕ್ಕೆ ಸಮನ್ವಯ ಸಮಿತಿಯ ಅಧ್ಯಕ್ಷ ಸಿದ್ದರಾಮಯ್ಯ  ನೆತೃತ್ವದಲ್ಲಿ ಪರಮೇಶ್ವರ್, ದಿನೇಶ್ ಗುಂಡೂರಾವ್ ಸೇರಿದಂತೆ ಇತರೆ ರಾಜ್ಯ ನಾಯಕರು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲಿದ್ದಾರೆ.

"

ಈ ಬಗ್ಗೆ ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪರಂ,  ಇಂದು ರಾಹುಲ್ ಗಾಂಧಿ ಅವರ ಜೊತೆ ಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ, ಸಂಪುಟ ವಿಸ್ತರಣೆ,  ಬಿಬಿಎಂಪಿ ಮೇಯರ್ ಚುನಾವಣೆ ಸೇರಿದಂತೆ ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆ ಕುರಿತು ಚರ್ಚೆಗಳು ಮಾಡಲಿದ್ದೇವೆ ಎಂದು ಹೇಳಿದರು.