ಬೆಂಗಳೂರು [ಆ.13] : ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾಗಿ ತಿಂಗಳಾಗುತ್ತಾ ಬಂದರೂ ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆಯಾಗಿಲ್ಲ. 

ಮುಖ್ಯಮಂತ್ರಿ ಓರ್ವರೇ ಸದ್ಯ ಅಧಿಕಾರ ನಿರ್ವಹಿಸುತ್ತಿದ್ದು, ಯಾವ ಖಾತೆಯ ನಿರ್ವಹಣೆ ಹೊಣೆಯನ್ನು ಯಾರಿಗೂ ವಹಿಸಿಲ್ಲ. ಜಿಲ್ಲೆಗಳ ಉಸ್ತುವಾರಿ ಸಚಿವರುಗಳ ನೇಮಕವೂ ಆಗಿಲ್ಲ.  ಈ ನಿಟ್ಟಿನಲ್ಲಿ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಸಚಿವರಿಂದ ಆಗಬೇಕಿದ್ದ ಧ್ವಜಾರೋಹಣ ಈ ಬಾರೀ ಜಿಲ್ಲಾಧಿಕಾರಿಗಳಿಂದಲೇ ಆಗಲಿದೆ. 

ಕರ್ನಾಟಕ ಪ್ರವಾಹದ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದ್ದು, 2019ನೇ ಸಾಲಿನ ಸ್ವಾತಂತ್ರ್ಯ ದಿನಾಚರಣೆಯನ್ನು ಜಿಲ್ಲಾ ಕೇಂದ್ರಗಳಲ್ಲಿ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಉಪ ವಿಭಾಗಗಳಲ್ಲಿ ಮತ್ತು ತಾಲೂಕುಗಳಲ್ಲಿ ತಹಶೀಲ್ದಾರರು ಧ್ವಜಾರೋಹಣ ಮಾಡಲು ಸೂಚಿಸಿದ್ದಾರೆ. 

ಅಲ್ಲದೇ ಈ ಭಾರೀ ರಾಜ್ಯದಲ್ಲಿ ತೀವ್ರ ಪ್ರವಾಹ ಪರಿಸ್ಥಿತಿ ಎದುರಾಗಿದ್ದು, ಸರಳವಾಗಿ ಸ್ವಾತಂತ್ರ್ಯ ದಿನಾಚರಣೆ ಆಚರಿಸುವಂತೆ ಸೂಚನೆ ನೀಡಲಾಗಿದೆ.