ನವದೆಹಲಿ[ಜು.1] : ಲೋಕಸಭೆ ಉಪಸಭಾಪತಿ ಸ್ಥಾನಕ್ಕೆ ಎನ್‌ಡಿಎ ಮೈತ್ರಿ ಪಕ್ಷಗಳಲ್ಲಿ ಒಂದಾದ ಶಿವಸೇನೆಯ ಅಭ್ಯರ್ಥಿಯೊಬ್ಬರನ್ನು ನೇಮಕ ಮಾಡುವ ಸಾಧ್ಯತೆ ಇದೆ.

ಈ ಮೊದಲು ಜಗನ್‌ಮೋಹನ್‌ ರೆಡ್ಡಿ ನೇತೃತ್ವ ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷಕ್ಕೆ ಈ ಹುದ್ದೆಯ ಆಫರ್‌ ನೀಡಲಾಗಿತ್ತು. ಆದರೆ ಆಂಧ್ರಕ್ಕೆ ವಿಶೇಷ ಸ್ಥಾನಮಾನ ನೀಡುವ ಬಗ್ಗೆ ಕೇಂದ್ರದಿಂದ ಖಚಿತ ಭರವಸೆ ಸಿಗದ ಹಿನ್ನೆಲೆಯಲ್ಲಿ ಅವರು ಹುದ್ದೆ ತಿರಸ್ಕರಿಸಿದ್ದರು. 

ಈ ಹಿನ್ನೆಲೆಯಲ್ಲಿ ಎನ್‌ಡಿಎ ಮೈತ್ರಿಕೂಟದ ಅತಿದೊಡ್ಡ ಪಕ್ಷವಾದ ಶಿವಸೇನೆಗೆ ಹುದ್ದೆ ನೀಡುವ ತೀರ್ಮಾನಕ್ಕೆ ಬರಲಾಗಿದೆ ಎಂದು ಮೂಲಗಳು ತಿಳಿಸಿವೆ.