ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ವಿದ್ಯಾರ್ಥಿಗಳ ತೇರ್ಗಡೆ ಪದ್ಧತಿಯನ್ನು ಶೀಘ್ರದಲ್ಲೇ ಮರು-ಪರಿಚಯಿಸಲಾಗುವುದು ಎಂದು ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ಸಚಿವ ಪ್ರಕಾಶ್ ಜಾವಡೇಕರ್ ಹೇಳಿದ್ದಾರೆ.

ಕೋಲ್ಕತ್ತಾ: ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ವಿದ್ಯಾರ್ಥಿಗಳ ತೇರ್ಗಡೆ ಪದ್ಧತಿಯನ್ನು ಶೀಘ್ರದಲ್ಲೇ ಮರು-ಪರಿಚಯಿಸಲಾಗುವುದು ಎಂದು ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ಸಚಿವ ಪ್ರಕಾಶ್ ಜಾವಡೇಕರ್ ಹೇಳಿದ್ದಾರೆ.

ಸಂಸತ್ತಿನಲ್ಲಿ ಮಂಡನೆಯಾಗಿರುವ ಮಸೂದೆಯಲ್ಲಿ, 5ನೇ ಹಾಗೂ 8ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆಗಳನ್ನು ನಡೆಸುವ ಅಧಿಕಾರವನ್ನು ರಾಜ್ಯಗಳಿಗೆ ನೀಡಲಾಗಿದೆ. ಮಾರ್ಚ್’ನಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮೇ ತಿಂಗಳಲ್ಲಿನಲ್ಲಿ ಇನ್ನೊಂದು ಅವಕಾಶವನ್ನು ನೀಡಲಾಗುವುದು, ಎಂದು ಜಾವಡೇಕರ್ ಹೇಳಿದ್ದಾರೆ.

ಮೇನಲ್ಲಿ ನಡೆಯುವ ಪರೀಕ್ಷೆಯಲ್ಲೂ ತೇರ್ಗಡೆ ಹೊಂದಲು ವಿಫಲರಾದ ವಿದ್ಯಾರ್ಥಿ ಮುಂದಿನ ತರಗತಿಗೆ ಹೋಗುವಂತಿಲ್ಲ; ಎಲ್ಲಾ ರಾಜ್ಯ ಸರ್ಕಾರಗಳು ಈ ಪದದ್ದತಿಗೆ ತಮ್ಮ ಒಪ್ಪಿಗೆಯನ್ನು ನೀಡಿವೆ, ಎಂದು ಅವರು ಹೇಳಿದ್ದಾರೆ.

ಅನುತ್ತೀರ್ಣಗೊಳಿಸದಿರುವ ಪದ್ಧತಿಯು ವಿದ್ಯಾರ್ಥಿಗಳ ಮೇಲೆ ದುಷ್ಪರಿಣಾಮ ಎಂದು ಜಾವಡೇಕರ್ ಹೇಳಿದ್ದಾರೆ.

(ಸಾಂದರ್ಭಿಕ ಚಿತ್ರ)